ಮಂಗಳವಾರ, ಅಕ್ಟೋಬರ್ 31, 2023

ಹೆಚ್‍ಟಿ, ಇಹೆಚ್‍ಟಿ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ನ.07ರಂದು

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಗೆ ಬರುವ ಬಳ್ಳಾರಿ ಗ್ರಾಮೀಣ, ಕುರುಗೋಡು, ಸಂಡೂರು ಮತ್ತು ಸಿರುಗುಪ್ಪ ತಾಲ್ಲೂಕುಗಳ ಎಲ್ಲಾ ಹೆಚ್‍ಟಿ ಮತ್ತು ಇಹೆಚ್‍ಟಿ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯನ್ನು ನ.07ರಂದು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಮೋತಿ ವೃತ್ತದ ಬುಡಾ ಕಾಂಪ್ಲೆಕ್ಸ್ ಹಿಂಭಾಗದ ಜೆಸ್ಕಾಂ ವಲಯ ಕಚೇರಿ ಮೊದಲನೇ ಮಹಡಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ