ಶುಕ್ರವಾರ, ಅಕ್ಟೋಬರ್ 6, 2023

ಡಿ.09ರಂದು ರಾಷ್ಟ್ರೀಯ ಲೋಕ ಅದಾಲತ್

ಬಳ್ಳಾರಿ,ಅ.06(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಮೂಲಕ ಬಗೆಹರಿಸಿಕೊಳ್ಳಬಹುದಾದ ಹಾಗೂ ವ್ಯಾಜ್ಯ ಪೂರ್ವ ದಾವಾ ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥಗೊಳಿಸಲು ಇದೇ ಡಿ.09ರಂದು ಬೆಳಿಗ್ಗೆ 10ರಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಈ ಮೆಗಾ ಅದಾಲತ್ ಕಾರ್ಯಕ್ರಮದಲ್ಲಿ ಬ್ಯಾಂಕ್ ರಿಕವರಿ, ಕಾರ್ಮಿಕ ವಿವಾದಗಳು, ಎಲೆಕ್ಟ್ರಿಸಿಟಿ ಮತ್ತು ಕುಡಿಯುವ ನೀರಿನ, ವೈವಾಹಿಕ, ಕಂದಾಯ ಪ್ರಕರಣಗಳು, ಭೂಮಿ ವಿವಾದ ಸೇರಿದಂತೆ ಇತರೆ ಪ್ರಕರಣಗಳ ಕುರಿತು ಶೀಘ್ರವಾಗಿ ಇತ್ಯರ್ಥಗೊಳಿಸಲಾಗುತ್ತದೆ. ಪ್ರಿ-ಲಿಟಿಗೇಶನ್ ಮತ್ತು ಕೋರ್ಟ್‍ನಲ್ಲಿ ಪೆಂಡಿಂಗ್ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ವಕೀಲರ ಮುಖಾಂತರವಾಗಲೀ ಅಥವಾ ತಾವೇ ನೇರವಾಗಿ ಭಾಗವಹಿಸಬಹುದು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ಇಬ್ಬರ ಒಪ್ಪಿಗೆಯಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದ ತೀರ್ಮಾನವಾಗುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ನಿಮಗೆ ತೃಪ್ತಿಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಚ್.ಪುಷ್ಪಾಂಜಲಿ ದೇವಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್.ಹೊಸಮನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ