ಸೋಮವಾರ, ಅಕ್ಟೋಬರ್ 9, 2023
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ಪೂರ್ವಭಾವಿ ಸಭೆ ಅ.12ರಂದು
ಬಳ್ಳಾರಿ,ಅ.09(ಕರ್ನಾಟಕ ವಾರ್ತೆ):
ಅಕ್ಟೋಬರ್ 28ರಂದು ಸೀಗೆ ಹುಣ್ಣಿಮೆ ದಿನದಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಅ.12ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಸದರಿ ಸಭೆಗೆ ಜಿಲ್ಲೆಯ ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖಂಡರು, ಜಿಲ್ಲಾ ಮಟ್ಟದ, ವಿಭಾಗಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ತಮ್ಮ ಸಲಹೆ ಸೂಚನೆಯನ್ನು ನೀಡಲು ಅವರು ಕೋರಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ