ಮಂಗಳವಾರ, ಅಕ್ಟೋಬರ್ 10, 2023

ಕಲಬುರಗಿ ವಿಭಾಗ ಮಟ್ಟದ ಸರ್ಕಾರಿ ನಿವೃತ್ತ ನೌಕರರ ಹಾಗೂ ಹಿರಿಯ ನಾಗರಿಕರ ಸಮ್ಮೇಳನ ಅ.12ರಂದು

ಬಳ್ಳಾರಿ,ಅ.10(ಕರ್ನಾಟಕ ವಾರ್ತೆ): ಕಲಬುರಗಿ ವಿಭಾಗ ಮಟ್ಟದ ಸರ್ಕಾರಿ ನಿವೃತ್ತ ನೌಕರರ ಹಾಗೂ ಹಿರಿಯ ನಾಗರಿಕರ ಸಮ್ಮೇಳನ ಕಾರ್ಯಕ್ರಮ ಅ.12ರಂದು ಬೆಳಿಗ್ಗೆ 11ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ರಾಘವ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಉದ್ಘಾಟನೆ ಮಾಡುವರು. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ.ಎಂ.ಟಿ.ಮಲ್ಲೇಶ್ ಅವರು ಅಧ್ಯಕ್ಷತೆ ವಹಿಸುವರು. ಇತರೆ ಗಣ್ಯರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಸಂಘದ ಪದಾಧಿಕಾರಿಗಳು ಹಾಗೂ ನಾಮ ನಿರ್ದೇಶಿತ ಸದಸ್ಯರು ಉಪಸ್ಥಿತರಿರುವರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ