ಬುಧವಾರ, ಅಕ್ಟೋಬರ್ 18, 2023
ಬಳ್ಳಾರಿ: ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಅ.19ರಂದು
ಬಳ್ಳಾರಿ,ಅ.18(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ಮತ್ತು 2 ಉಪವಿಭಾಗದ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ಅ.19ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ನಗರದ ವೃತ್ತ ಕಚೇರಿಯ ಮೊದಲ ಮಹಡಿಯಲ್ಲಿರುವ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದ್ದು, ಸಭೆಯಲ್ಲಿ ಮುಖ್ಯವಾಗಿ ಕೆಇಆರ್‍ಸಿ ಜಕಾತಿ ದರ ಆದೇಶದಲ್ಲಿನ ರಿಯಾಯಿತಿ ದರ ಯೋಜನೆ ಕುರಿತು ಮಾಹಿತಿ ನೀಡಲಾಗುವುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ