ಬುಧವಾರ, ಅಕ್ಟೋಬರ್ 18, 2023

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ; ರಾಷ್ಟ್ರೀಯ ಸಮ್ಮೇಳನ ನ.22ರಿಂದ

ಬಳ್ಳಾರಿ,ಅ.18(ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು "Climate Resilience and Sustainable Development" ಎಂಬ ವಿಷಯದ ಮೇಲೆ ನ.22ರಿಂದ 24ರವರೆಗೆ ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರಿನ ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗುತ್ತಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ಅವರು ತಿಳಿಸಿದ್ದಾರೆ. ಈ ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ತಜ್ಞರು ಉಪನ್ಯಾಸ ನೀಡಲಿದ್ದಾರೆ. ಅಲ್ಲದೇ ಈ ಸಮ್ಮೇಳನದಲ್ಲಿ Paper presentation and Working Model ಸಹ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ Paper and Model ಗಳಿಗೆ ಬಹುಮಾನವನ್ನು ನೀಡಲಾಗುವುದು. ಸಮ್ಮೇಳನವು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪೆÇ್ರ.ಯು.ಆರ್.ರಾವ್ ವಿಜ್ಞಾನ ಭವನ, ಜಿ.ಕೆ.ವಿ.ಕೆ. ಆವರಣ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೆÇೀಸ್ಟ್, ಬೆಂಗಳೂರು 560097 ದೂರವಾಣಿ ಸಂಖ್ಯೆ:080-29721550, ಇಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಸಂಶೋಧಕರು/ವಿಜ್ಞಾನಿಗಳು ಹಾಗೂ ಪ್ರಾಧ್ಯಾಪಕರು/ಉಪನ್ಯಾಸಕರು ಭಾಗವಹಿಸಬಹುದಾಗಿದೆ. ನಿಗದಿತ ಶುಲ್ಕವನ್ನು ಪಾವತಿಸಿ ನ.15ರೊಳಗಾಗಿ ಗೂಗಲ್ ಫಾರಂ (https://forms.gle/VBZdYHcawb4u09Jb9) ಮೂಲಕ ನೋಂದಾಯಿಸಿ ಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಮೊ. 9845258894, ಅಥವಾ ಅಕಾಡೆಮಿಯ ವೆಬ್ ಸೈಟ್ www.kstacademy.in ವೀಕ್ಷಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ