ಶುಕ್ರವಾರ, ಅಕ್ಟೋಬರ್ 13, 2023
ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ; ನಿಧಿ ಅಪ್ಕೆ ನಿಕಟ್ ಕಾರ್ಯಕ್ರಮ ಅ.27ರಂದು
ಬಳ್ಳಾರಿ,ಅ.13(ಕರ್ನಾಟಕ ವಾರ್ತೆ):
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಜಿಲ್ಲಾ ಪ್ರಾದೇಶಿಕ ಕಚೇರಿಯ ಉದ್ಯೋಗಿಗಳ ಭವಿಷ್ಯನಿಧಿ ಮತ್ತು ಪಿಂಚಣಿ ಇತ್ಯಾದಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ನಿವಾರಿಸಲು ಅಕ್ಟೋಬರ್ 27ರಂದು ಬೆಳಿಗ್ಗೆ 9ರಿಂದ ಸಂಜೆ 6 ರವರೆಗೆ ‘ನಿಧಿ ಆಪ್ಕೆ ನಿಕಟ್' ಕಾರ್ಯಕ್ರಮವನ್ನು ಸಂಡೂರು ತಾಲೂಕಿನ ತೋರಣಗಲ್ಲಿನ ಸೌತ್ ವೆಸ್ಟ್ ಮೈನಿಂಗ್ ಲಿಮಿಟೆಡ್‍ನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವು ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರ ಕುಂದುಕೊರತೆ ಪರಿಹಾರ ಮತ್ತು ಮಾಹಿತಿ ವಿನಿಮಯ ಸೇರಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ.
ಉದ್ಯೋಗದಾತರ ಕರ್ತವ್ಯಗಳು, ಜವಾಬ್ದಾರಿಗಳ ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರುವ ಆನ್‍ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು ಹಾಗೂ ಸುಧಾರಣೆಗಳ ಮಾಹಿತಿ ಒದಗಿಸುವುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ:08392-226304 ಗೆ ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಭವಿಷ್ಯನಿಧಿ ಉಪ ಆಯುಕ್ತ ಟಿ.ಎನ್.ನಂದನ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ