ಶನಿವಾರ, ಅಕ್ಟೋಬರ್ 21, 2023

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಅ.27ರಂದು

ಬಳ್ಳಾರಿ,ಅ.21(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಅವರು ತಿಳಿಸಿದ್ದಾರೆ. ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರೆ ಡಿ.ತ್ರಿವೇಣಿ ಸೇರಿದಂತೆ ಇತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಬಿ.ಸಿದ್ದಲಿಂಗಪ್ಪ ಅವರು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಕುರಿತು ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ, ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್‍ಸಾಬ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ