ಭಾನುವಾರ, ಅಕ್ಟೋಬರ್ 1, 2023
ಶುಚಿತ್ವ ಕಾಪಾಡುವಿಕೆಯಿಂದ ರೋಗ, ಕ್ರೀಮಿ ಕೀಟಗಳ ನಿಯಂತ್ರಣ: ಡಿಹೆಚ್‍ಒ ಡಾ.ವೈ ರಮೇಶ ಬಾಬು
ಬಳ್ಳಾರಿ,ಅ.01(ಕರ್ನಾಟಕ ವಾರ್ತೆ):
ಎಲ್ಲ ಸರ್ಕಾರಿ ಆಸ್ಪತ್ರೆಗಳು, ಶಾಲೆ, ಧಾರ್ಮಿಕ ಹಾಗೂ ಸಾರ್ವಜನಿಕ ಸ್ಥಳಗಳು ಸೇರಿದಂತೆ ಉದ್ಯಾನವನಗಳಲ್ಲಿ ಮುಖ್ಯವಾಗಿ ಸ್ವಚ್ಛತೆ ಕಾಪಾಡುವುದರಿಂದ ರೋಗ, ಕ್ರಿಮಿ ಕೀಟಗಳ ನಿಯಂತ್ರಣ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ ಬಾಬು ಅವರು ಅಭಿಪ್ರಾಯ ಪಟ್ಟರು.
ಪ್ರಧಾನ ಮಂತ್ರಿಗಳ ಕರೆಯಂತೆ, “ಸ್ವಚ್ಛತಾ ಹಿ ಸೇವಾ” ಅಭಿಯಾನದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್ ಬಸರೆಡ್ಡಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳು ಯಾವುದೇ ಖಾಸಗಿ ಆಸ್ಪತ್ರೆಗಳಿಗಳಿಗಿಂತ ಕಡಿಮೆ ಇಲ್ಲದ ರೀತಿಯಲ್ಲಿ ಸ್ವಚ್ಚತೆ ಕಾಯ್ದಿಟ್ಟುಕೊಳ್ಳುವ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ಒದಗಿಸುತ್ತಿವೆ ಎಂದು ಹೇಳಿದರು.
ಆಸ್ಪತ್ರೆಗಳ ಹೊರ ಆವರಣದಲ್ಲಿ ತ್ಯಾಜ್ಯ ತೆರವುಗೊಳಿಸುವುದರಿಂದ ಕ್ರೀಮಿ ಕೀಟ, ಸೊಳ್ಳೆಗಳ ನಿಯಂತ್ರಣದಿಂದ ಸ್ವಚ್ಚ ಗಾಳಿ, ಉಲ್ಲಾಸ ವಾತಾವರಣ ಕಾಣಬಹುದಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸಿದಾಗ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಲ್ಲ ತಜ್ಞ ವೈದ್ಯರು, ವೈದ್ಯ ಸಿಬ್ಬಂದಿಯವರು, ಯಾವ ಬೇಧವಿಲ್ಲದೆ ಎಲ್ಲರೂ ಸೇರಿ ಜಿಲ್ಲಾ ಆಸ್ಪತ್ರೆ ಆವರಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಕಸ-ಕಡ್ಡಿ, ಗಿಡ-ಗಂಟಿ ಕಿತ್ತು ಪ್ಲಾಸ್ಟಿಕ್ ತ್ಯಾಜ್ಯವನ್ನು ಒಂದೆಡೆಗೂಡಿಸಿ ಸ್ವಚ್ಛಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ಥಾನಿಕ ವೈದ್ಯಾಧಿಕಾರಿ ಡಾ.ಹೆಚ್.ವಿಶ್ವನಾಥ, ಉಪ ಮುಖ್ಯ ವೈದ್ಯಾಧಿಕಾರಿ ಡಾ.ಗುರುನಾಥ್ ಬಿ.ಚೌವ್ಹಾಣ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿಕೆ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಅನೀಲ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ, ತಜ್ಞವೈದ್ಯರಾದ ಡಾ.ಮಲ್ಲಿಕಾರ್ಜುನ, ಡಾ.ಶ್ರೀಧರ, ಡಾ.ಉದಯಶಂಕರ, ಡಾ.ವಿಶಾಲಾಕ್ಷಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಶುಶ್ರೂಷಣಾಧಿಕಾರಿ ಸೇಲೀನಾ, ಆಡಳಿತ ಅಧಿಕಾರಿ ದೇಸಾಯಿ ಸೇರಿದಂತೆ ತಜ್ಞವೈದ್ಯರು, ಸಿಬ್ಬಂದಿಯವರು ಉಪಸ್ಥಿತರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)









ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ