ಗುರುವಾರ, ಅಕ್ಟೋಬರ್ 26, 2023
ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ಅ.26(ಕರ್ನಾಟಕ ವಾರ್ತೆ):
ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಇಲಾಖಾ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿ ಸಿದ್ಧಪಡಿಸುವಿಕೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.
ಹೊಸದಾಗಿ ನೂತನ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳ ಪದವೀಧರರು 01.11.2020 ಕ್ಕಿಂತಲೂ ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ನಿಗದಿಪಡಿಸಿದ ನಮೂನೆ-18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸ್ಥಳದ ದಾಖಲೆಗಳನ್ನು ಸ್ವಯಂಧೃಡೀಕರಿಸಿ ಅರ್ಜಿಯೊಂದಿಗೆ ದಿನಾಂಕ 06.11.2023ರ ಒಳಗಾಗಿ ಮತದಾರರ ನೊಂದಣಾಧಿಕಾರಿಗಳು/ಸಹಾಯಕ ಮತದಾರರ ನೋಂದಣಾಧಿಕಾರಿಗಳು/ಸಂಬಂಧಪಟ್ಟ ವಿಧಾನಸಭಾ ಮತಕೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರರ ಕಾರ್ಯಾಲಯದಲ್ಲಿ) ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಸೇವೆಯಲ್ಲಿರುವ ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗದಿಪಡಿಸಿರುವ 3ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ಗೊತ್ತುಪಡಿಸಿದ ಅಧಿಕಾರಿಗೆ ಅರ್ಜಿ ಸಲ್ಲಿಸಬಹುದು ಎಂದರು.
ಹೆಸರನ್ನು ನೋಂದಾಯಿಸಲು ವಿಳಾಸ ಗುರುತಿನ ಚೀಟಿ ಸಂಬಂಧಿಸಿದಂತೆ ಆಧಾರ್‍ಕಾರ್ಡ್ ಕಡ್ಡಾಯವಲ್ಲ. ಬದಲಾಗಿ, 6 ತಿಂಗಳು ಕಾಲ ವಾಸವಾಗಿರುವ ಕುರಿತು ದೃಢೀಕರಣ ಪ್ರಮಾಣ ಪತ್ರ, ರೇಷನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್ ಪಾಸ್‍ಬುಕ್, ಗ್ಯಾಸ್ ವಿತರಣೆ ಕಾರ್ಡ್ ಸೇರಿದಂತೆ ವಿಳಾಸವಿರುವ 11 ದಾಖಲೆಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿದಾರರ ಭಾವಚಿತ್ರದಲ್ಲಿ ಪರದೆಯ ಹಿಂದಿನ ಬಣ್ಣ ಬಿಳಿಯದ್ದಾಗಿರುವ ಫೋಟೋ ಸಲ್ಲಿಸಬೇಕು ಎಂದು ತಿಳಿಸಿದರು.
ನಮೂನೆ-18 ರ ಅರ್ಜಿಗಳನ್ನು ಚುನಾವಣಾ ಆಯೋಗವು ಇಆರ್‍ಎಂಎಸ್ (ಇಖಒS) ನಲ್ಲಿ ನಮೂದಿಸಲಾಗುತ್ತದೆ. ಈ ಹಿಂದೆ ಜಿಲ್ಲೆಯಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಪದವೀಧರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಈ ಬಾರಿ ಇದಕ್ಕಿಂತ ಹೆಚ್ಚು ಪಧವೀದರರನ್ನು ನೋಂದಾಯಿಸಿಕೊಳ್ಳುವಂತೆ ಪ್ರಚಾರ ನೀಡಬೇಕು ಎಂದು ಅವರು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು, ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಇತರೆ ಸಂಘ-ಸಂಸ್ಥೆಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ