ಸೋಮವಾರ, ಅಕ್ಟೋಬರ್ 16, 2023
“ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ” ಅಭಿಯಾನ ಕಾರ್ಯಕ್ರಮ
ಬಳ್ಳಾರಿ,ಅ.16(ಕರ್ನಾಟಕ ವಾರ್ತೆ):
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ ಅ.02ರಿಂದ ಒಂದು ತಿಂಗಳ ಅವಧಿಗೆಯವರೆಗೆ ವಿಶೇಷ ಐಇಸಿ ಕಾರ್ಯಕ್ರಮಗಳಾದ “ಮನೆ ಮನೆ ಜಾಥಾ” ಮತ್ತು “ರೋಜಗಾರ್ ದಿವಸ್” ಮೂಲಕ ಕಾರ್ಯಕ್ರಮ ಆಯೋಜಿಸಲು ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಿ ಕಾಲಮಿತಿಯೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯವು ಸೂಚನೆ ನೀಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕುರಿತು ಜನರಿಗೆ ತಿಳಿಸಲಾಗುತ್ತಿದೆ ಮತ್ತು ಕೆಲಸದ ಮತ್ತು ಕಾಮಗಾರಿಗಳ ಬೇಡಿಕೆಯನ್ನು ಸಂಗ್ರಹಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಯೋಜನೆಯಡಿ ದೊರೆಯುವ ಕೂಲಿಯ ಮೊತ್ತ, ಗಂಡು ಹೆಣ್ಣಿಗೆ ಸಮಾನ ಕೂಲಿ ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿ, ದೊರೆಯುವ ವೈಯಕ್ತಿಕ ಸೌಲಭ್ಯಗಳು ಮತ್ತು ಅರ್ಹತೆಗಳು, ಯೋಜನೆಯಡಿ ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರೀಕರಿಗೆ ಮತ್ತು ವಿಶೇಷ ಚೇತನರಿಗೆ ಶೇ.50 ರಷ್ಟು ರಿಯಾಯಿತಿ, ಕಾಮಗಾರಿಯ ಸ್ಮಳದಲ್ಲಿ ಒದಗಿಸಲಾಗುವ ಸೌಲಭ್ಯಗಳು, ಅಕುಶಲ ಮಹಿಳೆಯರು ಮತ್ತು ಲಿಂಗತ್ಯ ಅಲ್ಪಸಂಖ್ಯಾತರುಗಳಿಗೆ ನಿರ್ವಹಿಸುವ ಕೆಲಸಕ್ಕೆ/ಕೂಲಿ, ಕಾರ್ಮಿಕರಿಗೆ ಹೆಚ್ಚುವರಿಯಾಗಿ ಶೇ.20 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡುವ ಕುರಿತು, ಮಹಿಳಾ ಭಾಗವಹಿಸುವಿಕೆಯನ್ನು ಕನಿಷ್ಠ ಶೇ.60ರಷ್ಟು ಪ್ರತಿಶತಕ್ಕೆ ಹೆಚ್ಚಿಸುವುದು ಆಗಿದೆ ಎಂದಿದ್ದಾರೆ.
*ಇತರೆ ಉದ್ದೇಶಗಳು:*
ಜಲ ಸಂಜೀವಿನಿ ಕಾರ್ಯಕ್ರಮದಡಿ ವೈಜ್ಞಾನಿಕ ಯೋಜನಾ ವರದಿ ತಯಾರಿಕೆ ಮತ್ತು ಅನುಷ್ಠಾನದ ಮಹತ್ವ ಹಾಗೂ ಅಗತ್ಯತೆ ಒದಗಿಸುವುದು. ಇತರ ಪ್ರಮುಖ ಕಾರ್ಯಕ್ರಮಗಳ ಕುರಿತು (ಜಲಶಕ್ತಿ ಅಭಿಯಾನ, ಜಲಧೂತ್, ಎಬಿಪಿಎಸ್ ಇತರೆ) ಅಂಶಗಳ ಕುರಿತು ಮಾಹಿತಿಯನ್ನು ಒಳಗೊಂಡ ಭಿತ್ತಿ ಪತ್ರವನ್ನು ಪ್ರತಿ ಮನೆಗೂ ವಿತರಿಸಲಾಗುವುದು. ಯೋಜನೆಯ ಮಾಹಿತಿಯನ್ನು ಒಳಗೊಂಡ ವಿಡಿಯೋವನ್ನು ಇಲಾಖೆಯ ಯೂಟ್ಯೂಬ್ ಚಾನೆಲ್ ಖಆPಖ ಏಚಿಡಿಟಿಚಿಣಚಿಞಚಿ ನಲ್ಲಿ ಅಪೆÇ್ಲೀಡ್ ಮಾಡಲಾಗುವುದು ಮತ್ತು ವಿಡಿಯೋ ವೀಕ್ಷಿಸಲು ಕ್ಯೂಆರ್ ಕೋಡ್ ಒಳಗೊಂಡ ಭಿತ್ತಿ ಪತ್ರವನ್ನು ಪ್ರತಿ ಮನೆಯ ಬಾಗಿಲ ಮೇಲೆ ಅಂಟಿಸಲಾಗುತ್ತಿದೆ.
“ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯಡೆಗೆ” ಅಭಿಯಾನದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಸದಸ್ಯರು ಮತ್ತು ಪಂಚಾಯಿತಿ ಸಿಬ್ಬಂದಿಗಳು (ಗ್ರಾಮ ಕಾಯಕ ಮಿತ್ರ, ಮೇಟ್, ಬಿ.ಎಫ್.ಟಿ ರವರನ್ನು ಒಳಗೊಂಡು) ಹಾಗೂ ಅನುಷ್ಠಾನ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಬೇಕು ಮತ್ತು ತಮ್ಮ ವಾಡ್ರ್ಗಳ ಪ್ರತಿ ಮನೆಗೂ ಭೇಟಿ ನೀಡಿ ಯೋಜನೆಯ ಹಾಗೂ ಇತರ ಪ್ರಮುಖ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುವಂತೆ ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರತಿ ಮನೆಗೂ ಭೇಟಿ ನೀಡುವುದರ ಜೊತೆಗೆ ನಿರಂತರವಾಗಿ ಜಾಗೃತಿ ವಾಹನದ (ಧ್ವನಿವರ್ಧಕ) ಮೂಲಕ ಗ್ರಾಮಸ್ಥರಿಗೆ (ಹಿರಿಯ ನಾಗರಿಕರು, ಮಹಿಳೆಯರು, ದುರ್ಬಲ ವರ್ಗದವರು, ಲಿಂಗತ್ವ ಅಲ್ಪಸಂಖ್ಯಾತರು, ಸ್ವ-ಸಹಾಯ ಸಂಘಗಳು) ಹಾಗೂ ರೈತರಿಗೆ ಯೋಜನೆಯಡಿ ಸಿಗುವ ಸೌಲಭ್ಯಗಳ ಕುರಿತು ಮತ್ತು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯ “ಜಲ ಸಂಜೀವಿನಿ” ಕಾರ್ಯಕ್ರಮದ ಮಹತ್ವದ ಬಗ್ಗೆ ಪ್ರಚಾರ ಆಂದೋಲನ ಕೈಗೊಳ್ಳಲಾಗುತ್ತಿದೆ.
ಕಾಮಗಾರಿಗಳ ಬೇಡಿಕೆಯ ಅರ್ಜಿಗಳನ್ನು ಸ್ವೀಕರಿಸಲು ಜಾಗೃತಿ ವಾಹನದಲ್ಲಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮತ್ತು ಗ್ರಾಮ ಪಂಚಾಯಿತಿಯಲ್ಲಿ “ಕಾಮಗಾರಿ ಬೇಡಿಕೆ ಪೆಟ್ಟಿಗೆ" ಯನ್ನು ಇಡುವುದು. ಅ.31 ರವರಿಗೆ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ಹೇಳಿದ್ದಾರೆ.
*ಜಲಸಂಜೀವಿನಿ ವಾರ್ಷಿಕ ಕ್ರಿಯಾ ಯೋಜನೆ:*
ಈಗಾಗಲೇ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ “ಜಲ ಸಂಜೀವಿನಿ" ವಿಸ್ತ್ರುತ ಯೋಜನೆಯನ್ನು ಮುಂದಿನ ಮೂರು ವರ್ಷಕ್ಕೆ (2023-24, 2024-25 ಮತ್ತು 2025-26) ವೈಜ್ಞಾನಿಕ ಆಧಾರದ ಮೇರೆಗೆ “ಜಿಯೋ-ಸ್ಪೇಷಿಯಲ್ ತಂತ್ರಜ್ಞಾನಗಳನ್ನು ಬಳಸಿಕೊಂಡು ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಗಳನ್ನೊಳಗೊಂಡ ವಿವರವಾದ ವೈಜ್ಞಾನಿಕ ಯೋಜನಾವರದಿಯನ್ನು ಸಿದ್ಧಪಡಿಸಲಾಗಿದ್ದು, ಅದರಂತೆ ಸದರಿ ಸಾಲಿನಲ್ಲಿ ಮತ್ತು ಮುಂಬರುವ ಸಾಲಿನಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ” ಎಂದು ಅವರು ಜಿಪಂ ಸಿಇಒ ತಿಳಿಸಿದ್ದಾರೆ.
ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಗಳನ್ನು ಮುಂದಿನ ಆರ್ಥಿಕ 2024-25ನೇ ಸಾಲಿನಲ್ಲಿ ಕೈಗೆತ್ತಿಕೊಂಡು ಬೇಡಿಕೆ ಆಧಾರದ ಮೇರೆಗೆ ಕೈಗೆತ್ತಿಕೊಂಡು ಅನುಷ್ಠಾನಗೊಳಿಸುವುದು. ಕನಿಷ್ಠ ಶೇ.65ರಷ್ಟನ್ನು ನರೇಗಾದಡಿ ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಮತ್ತು ಪರಿಸರ ಸಮತೋಲನವನ್ನು ಕಾಪಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
*ವಾರ್ಡ್ ಸಭೆ:*
ಜನರಿಂದ ಹಾಗೂ ಕಾಮಗಾರಿ ಬೇಡಿಕೆ ಪೆಟ್ಟಿಗೆ ಮೂಲಕ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ವಾರ್ಡ್ ಸಭೆಗಳಲ್ಲಿ ಕಾಮಗಾರಿ ಪಟ್ಟಿ ತಯಾರಿಸಿ ಅನುಮೋದಿಸಿ ಗ್ರಾಮ ಸಭೆಗೆ ಸಲ್ಲಿಸುವುದು. ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಜಲ ಸಂಜೀವಿನಿ ಕಾರ್ಯಕ್ರಮದ ಮಹತ್ವದ ಬಗ್ಗೆ ಖಾತರಿಪಡಿಸುವುದು. ವಾರ್ಡ್ ಸಭೆಗಳನ್ನು ನವೆಂಬರ್15 ರೊಳಗೆ ಪೂರ್ಣಗೊಳಿಸಲಾಗುವುದು.
*ಗ್ರಾಮ ಸಭೆ:*
ಗ್ರಾಮ ಸಭೆಗಳನ್ನು ಪಂಚಾಯತ್ ರಾಜ್ ಕಾಯ್ದೆಯ ನಿಯಮಾನುಸಾರ ನವೆಂಬರ್ 30ರೊಳಗೆ ಪೂರ್ಣಗೊಳಿಸಿ, ವಾರ್ಷಿಕ ಕ್ರಿಯಾಯೋಜನೆಗೆ ಅನುಮೋದನೆಯನ್ನು ಪಡೆದುಕೊಳ್ಳಲಾಗುವುದು.
*ರೈತರಿಂದ ರೈತರಿಗಾಗಿ ಅಭಿಯಾನ:*
ಮಹಾತ್ಮಗಾಂಧಿ ಮಾರ್ಗಸೂಚಿಯಂತೆ ಒಟ್ಟು ವೆಚ್ಚದ ಶೇ.60ರಷ್ಟುನ್ನು ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಖರ್ಚು ಮಾಡಬೇಕು. ವೈಯಕ್ತಿಕ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆಯನ್ನು ಸರಳಗೊಳಿಸುವ ಉದ್ದೇಶದಿಂದ “ಜಲ ಸಂಜೀವಿನಿ”ಯಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡ, ಬಿಪಿಎಲ್ ಕುಟುಂಬಗಳು, ಸಣ್ಣ ಮತ್ತು ಅತಿ ಸಣ್ಣ ರೈತರು, ಅಂಗವಿಕಲರು ಸೇರಿದಂತೆ ಮಹಾತ್ಮಗಾಂಧಿ ನರೇಗಾದಡಿ ಎಲ್ಲಾ ವರ್ಗದ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಗ್ರಾಮ ಸಭೆಯಲ್ಲಿ ಮಂಡಿಸಿ ಒಂದೇ ಬಾರಿಗೆ ಅನುಮೋದನೆ ಪಡೆದುಕೊಳ್ಳುವುದು. ಈ ರೀತಿ ಅನುಮೋದನೆಗೊಂಡ ಪಟ್ಟಿಯಲ್ಲಿನ ಯಾವುದೇ ಫಲಾನುಭವಿಯು/ಕುಟುಂಬವು ಜೀವಿತಾವಧಿಯಲ್ಲಿ ರೂ.2.50 ಲಕ್ಷಗಳ ಮಿತಿಯೊಳಗೆ ತನಗೆ ಬೇಕಾದ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಲು ಅರ್ಹರೆಂದು ಪ್ರಚುರ ಪಡಿಸಲಾಗುವುದು.
*ದುರ್ಬಲ ವರ್ಗ:*
ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ದುರ್ಬಲ ವರ್ಗದ ಜನರಿಗೆ ಉದ್ಯೋಗದ ಅವಕಾಶಗಳನ್ನು ಕಲ್ಪಿಸುವುದರ ಜೊತೆಗೆ ಸಾಮಾಜಿಕ ರಕ್ಷಣೆಯನ್ನು ನೀಡುವುದು ಯೋಜನೆಯ ಮುಖಾಂತರ ನಿಗದಿತ ಹಕ್ಕುಗಳನ್ನು ನೀಡುವುದರೊಂದಿಗೆ ಸಮಾಜದಲ್ಲಿ ದುರ್ಬಲ ವರ್ಗದವರು, ವಿಶೇಷಗಾಗಿ ಹಿರಿಯ ನಾಗರೀಕರು, ವಿಶೇಷ ಚೇತನರು, ಲಿಂಗತ್ವ ಅಲ್ಪ ಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಯನ್ನು ಸಾಧಿಸಲು ಕ್ರಮವಹಿಸಲಾಗಿದೆ.
*ಮಹಿಳಾ/ಮಕ್ಕಳ ಅಭಿಯಾನ:*
ಶೋಷಿತ ಮಹಿಳೆಯರು, ಅಬಲೆಯರು, ಗ್ರಾಮೀಣ ಮಹಿಳೆಯರ ಸಮಸ್ಯೆಗಳನ್ನು ಗುರುತಿಸಿ, ವಿಶ್ಲೇಷಿಸಿ, ಸ್ಥಳೀಯ ಮಟ್ಟದ ಪರಿಹಾರ ಕ್ರಮಗಳನ್ನು ಕಂಡುಕೊಳ್ಳಲು ಗ್ರಾಮಸಭೆಯು ನೆರವಾಗುವುದು. ಸಾಧನೆಗೈದ ಮಹಿಳೆಯರನ್ನು ಪೆÇ್ರೀತ್ಸಾಹಿಸುವುದು, ಅಭಿವೃದ್ಧಿ ಚಟುವಟಿಕೆಗಳ ಕುರಿತು ಜಾಗೃತಿ ಸೇರಿದಂತೆ, ಅಹವಾಲುಗಳನ್ನು ಆಲಿಸಲು ಅರ್ಹ ಮಹಿಳಾ ಮೂಡಿಸುವುದು ಫಲಾನುಭವಿಗಳನ್ನು ಗುರುತಿಸಲು ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ ಆಯೋಜಸಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ