ಗುರುವಾರ, ಅಕ್ಟೋಬರ್ 5, 2023

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಅ.05(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕೆ.ಭೀಮಪ್ಪ ಅವರು ತಿಳಿಸಿದ್ದಾರೆ. *ಸೌಲಭ್ಯಗಳು:* ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯ ನೀಡಲಾಗುವುದು. ಈ ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ. *ಅರ್ಹತೆಗಳು:* ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ/ಆದಾಯಮಿತಿ ಇರುವುದಿಲ್ಲ. ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ/ಆದಾಯ ರೂ.8 ಲಕ್ಷಗಳಿಗಿಂತ ಕಡಿಮೆ ಇರಬೇಕು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವೂ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾ ಸಿಂಧು ಪೆÇೀರ್ಟಲ್ http://sevasindhu.karnataka.gov.in ಮೂಲಕ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.in ಇಲ್ಲಿಗೆ ಭೇಟಿ ನೀಡಬಹುದು ಅಥವಾ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005ಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಕುಮಾರಸ್ವಾಮಿ ದೇವಸ್ಥಾನ ಎದುರುಗಡೆಯ ವೀರನಗೌಡ ಕಾಲೋನಿಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ) ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-267038 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ