ಶನಿವಾರ, ಅಕ್ಟೋಬರ್ 7, 2023
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಗಳಡಿ ಅರ್ಜಿ ಆಹ್ವಾನ
ಬಳ್ಳಾರಿ,ಅ.07(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿನಲ್ಲಿ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯ ಪಡೆಯಲು ಇಚ್ಚಿಸುವವರಿಂದ ಆನ್‍ಲೈನ್‍ನ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
*ನಿಗಮದ ಯೋಜನೆಗಳ ವಿವರ:* ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‍ಗಳ ಸಹಯೋಗದೊಂದಿಗೆ) ಹಾಗೂ ಸ್ವಾವಲಂಬಿ ಸಾರಥಿ ಯೋಜನೆ.
*ಅರ್ಹತೆಗಳು:* ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಉಪ್ಪಾರ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.20 ಲಕ್ಷಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5, ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇರಿಸಿದೆ.
ಅರ್ಜಿ ಸಲ್ಲಿಸಲು ನ.03 ಕೊನೆಯ ದಿನವಾಗಿದೆ (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್‍ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಗಳು). ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://upparadevelopment.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂ.080-22252555ನಿಂದ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಶ್ರೀ ಕುಮಾರಸ್ವಾಮಿ ದೇವಸ್ಥಾನ ಎದುರು, ಕ್ಲಬ್ ರೋಡ್‍ನ ವೀರನಗೌಡ ಕಾಲೋನಿಯ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-267038ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಕೆ.ಭೀಮಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ