ಮಂಗಳವಾರ, ಅಕ್ಟೋಬರ್ 3, 2023

ಸ್ವ-ಪ್ರೇರಿತರಾಗಿ ಅಂಗಾಂಗ ದಾನಕ್ಕೆ ನೊಂದಣಿ ಮಾಡಿಕೊಳ್ಳಿ: ಡಿಹೆಚ್‍ಒ ಡಾ.ವೈ ರಮೇಶ ಬಾಬು ಮನವಿ

ಬಳ್ಳಾರಿ,ಅ.03(ಕರ್ನಾಟಕ ವಾತೆ): ಮನುಷ್ಯ ಮರಣದ ನಂತರ ದೇಹವನ್ನು ಮಣ್ಣಲ್ಲಿ ಮಣ್ಣಾಗಿಸದೇ, ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಕಾಪಾಡುವ ಸಾರ್ಥಕತೆಗಾಗಿ ಪ್ರತಿಯೊಬ್ಬರು ಸ್ವಯಂ-ಪ್ರೇರಿತರಾಗಿ ನೊಂದಣಿ ಮಾಡಿಕೊಳ್ಳಲು ಮುಂದೆ ಬರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶಬಾಬು ಅವರು ವಿನಂತಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೋಕಾ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮೋಕಾ, ವಣೇನೂರು, ಬಸರಕೋಡು, ಭೈರದೇವನಹಳ್ಳಿ ಗ್ರಾಮಗಳ ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಮೋಕಾದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಯುμÁ್ಮನ್ ಭವಃ ಅಡಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಂತ್ಯೋದಯ ಮಾದರಿಯಲ್ಲಿ ಆರೋಗ್ಯ ಸೇವೆಗಳನ್ನು ಜನತೆಗೆ ತಲುಪಿಸುವ ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷವರೆಗೆ, ಎಪಿಎಲ್ ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷವರೆಗೆ ಉಚಿತ ಚಿಕಿತ್ಸೆಯನ್ನು ಸುಸಜ್ಜಿತ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಮೂಲಕ ಕಡುಬಡವರಿಗೂ ಗುಣಮಟ್ಟದ ಆರೋಗ್ಯ ಸೇವೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು. ಆಯುμÁ್ಮನ್ ಭವಃ ಆರೋಗ್ಯ ಅಭಿಯಾನದ ಅಡಿ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಮಂಗಳವಾರ ಉಚಿತ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯವಾಗಿ ಸಕ್ಕರೆ ಖಾಯಿಲೆ, ರಕ್ತದೊತ್ತಡ, ಕ್ಷಯರೋಗ ಪರೀಕ್ಷೆ, ರಕ್ತದಾನ ಶಿಬಿರಗಳಲ್ಲಿ ಭಾಗಿಯಾಗಿ ಜನತೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸಿದರು. ಮೋಕಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಿರಿಯಾಳು ಪಕೀರಮ್ಮ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ.ಭಾರತಿ, ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ, ಉಪಾಧ್ಯಕ್ಷ ನಾಗವೇಣಿ ನಾಗರಾಜ ಹೊನ್ನಾರೆಡ್ಡಿ, ಪಿಡಿಓ ಕಾಂತರಾಜ, ಚಂದ್ರಕಲಾ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಮರಿಯಂಬಿ ವಿಕೆ, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ, ತಜ್ಞ ವೈದ್ಯರಾದ ಡಾ.ಜುಬೇರ್, ಡಾ.ಸುಧಾಕರ್, ಡಾ.ಶ್ರೀನಾಥ, ಡಾ.ನಿತೀಶ್ ಕುಮಾರ್, ಡಾ.ಸಂಜೀವ್, ಡಾ.ಅರ್ಜುಮುನ್ನಿಸಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಜಿಲ್ಲಾ ಎನ್‍ಸಿಡಿ ಕನ್ಸ್‍ಲ್ಟ್‍ಂಟ್ ಡಾ.ಜಬೀನಾ ತಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷೀದ್ ಬೇಗಂ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ಕಚೇರಿ ಅಧೀಕ್ಷಕ ಸಂತೋμï, ಸುತ್ತಮುತ್ತಿನ ಗ್ರಾಮಗಳ ಸಾರ್ವಜನಿಕರು, ಇಲಾಖೆ ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. *ಶಿಬಿರ ಅಚ್ಚುಕಟ್ಟಾಗಿ ಆಯೋಜನೆ:* ಶಿಬಿರದಲ್ಲಿ ಅಂಗಾಂಗ ನೊಂದಣಿ, ಎಬಿ-ಪಿಎಮ್‍ಜೆವೈ-ಆರ್‍ಕೆ, ಆಭಾ ಕಾರ್ಡ್ ನೊಂದಣಿ, ಆರೋಗ್ಯ ವಸ್ತು ಪ್ರದರ್ಶನ, ಕ್ಷಯರೋಗ, ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಮಳಿಗೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸದರಿಂದ ಸಾರ್ವಜನಿಕರು ಸಾಲಿನಲ್ಲಿ ಬಂದು ಸೌಲಭ್ಯ ಪಡೆಯಲು ಸಹಕಾರಿಯಾಯಿತು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ