ಶುಕ್ರವಾರ, ಅಕ್ಟೋಬರ್ 13, 2023

ತೋಟಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಅ.13(ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆಯಿಂದ ಪ್ರಸ್ತಕ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯಕ್ಕಾಗಿ ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಯೋಜನೆಗಳು: ರಾಷ್ಟ್ರೀಯ ತೋಟಗಾರಿಕೆ ಮಿಷನ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ, ರಾಷ್ಟ್ರೀಯ ಎಣ್ಣೆಕಾಳು ಮತ್ತು ಎಣ್ಣೆ ತಾಳೆ ಅಭಿಯಾನ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತೋಟಗಾರಿಕೆಯಲ್ಲಿ ಯಾಂತ್ರೀಕರಣ ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಗಳಡಿ ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ-ಶೇ.20, ಪರಿಶಿಷ್ಟ ಪಂಗಡ-ಶೇ.07, ಅಲ್ಪಸಂಖ್ಯಾತರು-ಶೇ.15, ವಿಶೇಷಚೇತನರು-ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.08392-278179 ಹಾಗೂ ಆಯಾ ತಾಲ್ಲೂಕುಗಳ ತೋಟಗಾರಿಕೆ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ