ಶುಕ್ರವಾರ, ಅಕ್ಟೋಬರ್ 20, 2023
ಯುವಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಅ.20(ಕರ್ನಾಟಕ ವಾರ್ತೆ):
ನಗರದ 14 ವಾರ್ಡ್‍ನ ಮಿಲ್ಲರಪೇಟೆಯ ಗಡ್ಡೆ ಕೆಳಗೆ ಯಲ್ಲಮ್ಮ ಗುಡಿಯ ಹತ್ತಿರದ ನಿವಾಸಿ ನವೀದ್ ಅಹಮ್ಮದ್ ಎನ್ನುವ 26 ವರ್ಷದ ಯುವಕ ಅಕ್ಟೋಬರ್ 19ರಂದು ಕಾಣೆಯಾಗಿರುವ ಕುರಿತು ಬ್ರೂಸ್‍ಪೇಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು: ಎತ್ತರ 5.8 ಅಡಿ, ಕೋಲುಮುಖ, ಗೋಧಿ ಮೈಬಣ್ಣ, ಕಪ್ಪು ಕೂದಲು ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಆರೆಂಜ್ ಬಣ್ಣದ ಅಂಗಿ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ಈ ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ದೂ.08392-72022 ಹಾಗೂ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ