ಶನಿವಾರ, ಅಕ್ಟೋಬರ್ 28, 2023

ಆರ್.ಎನ್.ಶಿವರಾಜ್ ಅವರಿಗೆ ಜಿಲ್ಲಾ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಂಸೆಯ ಪ್ರಶಸ್ತಿ

ಬಳ್ಳಾರಿ,ಅ.28(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲ್ಲೂಕಿನ ರಾವಿಹಾಳ್ ಗ್ರಾಮದ ಆರ್.ಎನ್.ಶಿವರಾಜ್ ಅವರಿಗೆ ಜಿಲ್ಲಾ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಂಸೆಯ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಾಗೂ ಅತ್ಯುತ್ತಮ ಸೇವೆ ಸಲ್ಲಿಸಿದ ಮಹನೀಯರನ್ನು ಗುರುತಿಸಿ, ಜಿಲ್ಲಾಡಳಿತವು ಮಹರ್ಷಿ ವಾಲ್ಮೀಕಿ ಜಯಂತಿಯಂದು ನೀಡುವ ಪ್ರಶಂಸೆಯ ಪ್ರಶಸ್ತಿಗೆ ಆರ್.ಎನ್.ಶಿವರಾಜ್ ಅವರು ಭಾಜನರಾಗಿದ್ದಾರೆ. ಇವರು, ಕೋವಿಡ್ ಅವಧಿಯಲ್ಲಿ ಜಿಲ್ಲಾಡಳಿತದ ಅಧೀನದಲ್ಲಿ ಕೋರೋನಾ ಸೈನಿಕನಾಗಿ, ಸೋಂಕಿತರ ಹಾರೈಕೆ ಮಾಡುವ ಮೂಲಕ ಅತ್ಯುತ್ತಮ ಸೇವೆ ಸಲ್ಲಿಸಿದ್ದರು. ಇವರ ಅಗಾಧ ಸಮಾಜ ಸೇವೆಯನ್ನು ಗುರುತಿಸಿ ಜಿಲ್ಲಾಡಳಿತವು, ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಶಿವರಾಜ ಅವರನ್ನು ಸನ್ಮಾನಿಸಲಾಯಿತು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಜರಿದ್ದರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ