ಶನಿವಾರ, ಅಕ್ಟೋಬರ್ 21, 2023
ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಅ.21(ಕರ್ನಾಟಕ ವಾರ್ತೆ):
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2023-24ನೇ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದಂತಹ ಮಕ್ಕಳಿಗೆ ಪೆÇ್ರೀತ್ಸಾಹಿಸಲು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 04 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್‍ಕುಮಾರ್ ಅವರು ತಿಳಿಸಿದ್ದಾರೆ.
ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ 5 ರಿಂದ 18 ವರ್ಷದೊಳಗಿನ ವಯೋಮಿತಿ ಒಳಗಿರುವ ಮಕ್ಕಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ನಗರದ ಎಸ್.ಪಿ. ವೃತ್ತದ ಬಳಿಯ ದೇವಿನಗರದ ಸ್ತ್ರೀ ಸೇವಾನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-266216 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ