ಮಂಗಳವಾರ, ಅಕ್ಟೋಬರ್ 10, 2023
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ: ಎಸ್‍ಎಸ್‍ಪಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಅ.10(ಕರ್ನಾಟಕ ವಾರ್ತೆ):
2023-24ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ (ಮುಸ್ಲಿಂ, ಕ್ರಿಶ್ಚಿಯನ್. ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ (SSP) ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ https://ssp,karnatka.go.in ಮೂಲಕ ಅರ್ಜಿ ಸಲ್ಲಿಸಬೇಕು ಮತ್ತು ಅನ್‍ಲೈನ್ ಅರ್ಜಿಗಳನ್ನು ಸಂಬಂಧಪಟ್ಟ ಶಾಲೆ, ಕಾಲೇಜುಗಳ ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ/NPCI ಮ್ಯಾಪ್ ಆಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. 1ನೇ ತರಗತಿ ವಿದ್ಯಾರ್ಥಿಗಳು ಹೊಸತು (Fresh) ಎಂದು ಹೊಸದಾಗಿ ಅರ್ಜಿ ಸಲ್ಲಿಸಬೇಕು. 2ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಈಗಾಗಲೇ ನವೀಕರಣ (Renewal) ಮಾಡಲಾಗಿದ್ದು, ವಿದ್ಯಾರ್ಥಿಗಳ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಪರಿಶೀಲಿಸಬಹುದು. ಒಂದುವೇಳೆ 2ನೇ ತರಗತಿಯಿಂದ 8ನೇ ತರಗತಿ ವಿದ್ಯಾರ್ಥಿಗಳ ಮಾಹಿತಿ ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಈ ಹಿಂದೆ ನೊಂದಣಿ ಆಗದೇ ಇದ್ದಲ್ಲಿ ಮಾತ್ರ ಹೊಸತು (Fresh) ಎಂದು ಹೊಸದಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಬಗ್ಗೆ ಮಾಹಿತಿ ಮತ್ತು ತಾಂತ್ರಿಕ ತೊಂದರೆಗಳಾದಲ್ಲಿ ಹೆಲ್ಪ್‍ಡೆಸ್ಕ್ ನಂ:8277799990 (24/7) ಸಹಾಯವಾಣಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳ ದೂ.ಸಂ: ಬಳ್ಳಾರಿ-08392-245755, 8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ