ಮಂಗಳವಾರ, ಅಕ್ಟೋಬರ್ 31, 2023

ಜೀನ್ಸ್ ಉದ್ಯಮಕ್ಕೆ ನಿರಂತರ ವಿದ್ಯುತ್ ಪೂರೈಕೆ: ರವೀಂದ್ರ ಕರಿಲಿಂಗಣ್ಣನವರ್

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): ಅಕ್ಟೋಬರ್ ಮಾಹೆಯ ಕೆಲ ದಿನಗಳ ಕಾಲ ಆನ್‍ಶೆಡ್ಯೂಲ್ಡ್ ಲೋಡ್ ಶೆಡ್ಡಿಂಗ್ ಕಾರ್ಯ ಕೈಗೊಂಡಿದ್ದು, ಇದರ ಕುರಿತು ಗ್ರಾಹಕರಿಗೆ ಮನವರಿಕೆ ಮಾಡಿದ್ದಾರೆ. ನಿರಂತರ ವಿದ್ಯುತ್ ಪೂರೈಕೆ ಮಾಡಲು ಜೆಸ್ಕಾಂ ಕಂಪನಿಯು ಕ್ರಮಕೈಗೊಂಡಿದೆ ಹಾಗೂ ಮುಂದಿನ ದಿನಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಕರಿಲಿಂಗಣ್ಣನವರ್ ಅವರು ತಿಳಿಸಿದರು. ನಗರದ ಜೀನ್ಸ್ ಉದ್ಯಮಕ್ಕೆ ನಿರಂತರ ವಿದ್ಯುತ್ ಪೂರೈಕೆಗಾಗಿ ಅವರು ಖುದ್ದಾಗಿ ಜೀನ್ಸ್ ಅಪೆರಲ್ ಪಾರ್ಕ್‍ಗೆ ಭೇಟಿ ನೀಡಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಆಲಿಸಿದರು. ಖುದ್ದಾಗಿ ಬೇಟಿ ನೀಡಿದ ವ್ಯವಸ್ಥಾಪಕ ನಿರ್ದೇಕರ ಕಾರ್ಯಕ್ಕೆ ಜೀನ್ಸ್ ಉದ್ಯಮಿಗಳ ಪರವಾಗಿ ಉಪಾಧ್ಯಕ್ಷ ಮಲ್ಲಿಕಾರ್ಜುನ ರವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಜೆಸ್ಕಾಂ ಕಂಪನಿಯ ತಾಂತ್ರಿಕ ನಿರ್ದೇಶಕ ಆರ್.ಡಿ.ಚಂದ್ರಶೇಖರ್, ಬಳ್ಳಾರಿ ಗ್ರಾಮೀಣ ವಿಭಾಗೀಯ ಕಾರ್ಯನಿರ್ವಾಹಕ ಅಭಿಯಂತರರಾದ ಜೆ.ರಂಗನಾಥ ಬಾಬು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ