ಮಂಗಳವಾರ, ಅಕ್ಟೋಬರ್ 10, 2023
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಅ.10(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿನಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಫ್ ನೀಡಲು ಸೇವಾಸಿಂಧು ಪೋರ್ಟಲ್ ಮೂಲಕ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಅ.31ರವರೆಗೆ ವಿಸ್ತರಿಸಲಾಗಿದೆ.
ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯೊಂದಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಹಾಗೂ ಅಧಿಸೂಚನೆ ಮತ್ತು ವಿವರಗಳಿಗಾಗಿ ವೆಬ್‍ಸೈಟ್ http://dom.karnataka.gov.in ಗೆ ಭೇಟಿ ನೀಡಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ