ಸೋಮವಾರ, ಅಕ್ಟೋಬರ್ 30, 2023

ಅಪರಿಚಿತ ಮೃತ ಗಂಡಸಿನ ಶವ ಪತ್ತೆ: ವಾರಸುದಾರರ ಪತ್ತೆಗಾಗಿ ಮನವಿ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ನಗರದ ಕೌಲ್‍ಬಜಾರ್‍ನ ವೀರಶೈವ ಕಾಲೇಜಿಗೆ ಹೋಗುವ ರಸ್ತೆಯ ನೀರಾವರಿ ಇಲಾಖೆ ಕಚೇರಿ ಮುಂದೆ ಸುಮಾರು 70 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಅಸ್ವಸ್ಥನಾಗಿ, ಎರಡು ಮೂರು ದಿನಗಳಿಂದ ಪ್ರಜ್ಞಾಹೀನನಾಗಿದ್ದುದರಿಂದ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮೃತಪಟ್ಟಿರುತಾನೆ ಎಂದು ವೈದ್ಯರು ತಿಳಿಸಿರುತ್ತಾರೆ. ಮೃತನ ವಾರಸುದಾರರು ಪತ್ತೆಯಾಗಿರುವುದಿಲ್ಲ. ಚಹರೆ ಗುರುತು: ಎತ್ತರ ಸುಮಾರ 5 ಅಡಿ, ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿರುತ್ತಾನೆ. ಬಿಳಿ ಬಣ್ಣದ ಜುಬ್ಬ, ವಿವಿಧ ಬಣ್ಣದ ಡಿಜೈನ್ ಇರುವ ಲುಂಗಿ ಧರಿಸಿರುತ್ತಾನೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ.08392-240731, ಪಿ.ಐ. ಮೊ.9480803047, ಪಿಎಸ್‍ಐ ಮೊ.9480803084 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಕೌಲ್‍ಬಜಾರ್ ಪೊಲೀಸ್ ಠಾಣೆಯ ಸಹಾಯಕ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ