ಮಂಗಳವಾರ, ಅಕ್ಟೋಬರ್ 31, 2023

ಶಿಕ್ಷಣದಲ್ಲಿ ಮಾನವೀಯತೆಯ ಮೌಲ್ಯ ಬೋಧಿಸುವ ಕೆಲಸವಾಗಲಿ: ಪಿಜಿಆರ್ ಸಿಂಧ್ಯ

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳು, ಕೇವಲ ಶೈಕ್ಷಣಿಕ ವಿಷಯಗಳಿಗೆ ಸೀಮಿತವಾಗದೇ ಪ್ರತಿಯೊಂದು ವಿಷಯದಲ್ಲಿ ಜ್ಞಾನವನ್ನು ಶೋಧಿಸುವ ಮತ್ತು ಉತ್ತರ ಕಂಡುಕೊಳ್ಳಲು ವಿದ್ಯಾರ್ಥಿಗಳಿಗೆ ಮಾನವೀಯತೆಯ ಮೌಲ್ಯಗಳನ್ನು ಬೋಧಿಸಿ, ಸಂರಕ್ಷಿಸುವ ಕೆಲಸ ಮಾಡಬೇಕು ಎಂದು ಭಾರತ ಸ್ಕೌಟ್ ಮತ್ತು ಗೈಡ್ಸ್‍ನ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಅವರು ಹೇಳಿದರು. ನಗರದ ಹೊರವಲಯದಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಭಾರತ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಬಳ್ಳಾರಿ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವವಿದ್ಯಾಲಯದ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಕಾಲೇಜುಗಳ ಉಪನ್ಯಾಸಕ ಮತ್ತು ಉಪನ್ಯಾಸಕಿಯರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಒಂದು ದಿನದ ರೋವರಿಂಗ್ ಮತ್ತು ರೇಂಜರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸುಂದರ ಬದುಕು ಹಾಗೂ ಆರೋಗ್ಯಕರ ಸಮಾಜ ಕಟ್ಟುವಲ್ಲಿ ಸ್ಕೌಟ್ ಮತ್ತು ಗೈಡ್ಸ್‍ನ ಶಿಸ್ತು ಹಾಗೂ ಕೌಶಲ್ಯದ ಪಾತ್ರ ಮಹತ್ವದ್ದಾಗಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಸ್ಕೌಟ್ಸ್ ಮತ್ತು ಗೈಡ್ಸ್‍ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕøತಿಯ ಅರಿವನ್ನು ಮೂಡಿಸುವ ಕೆಲಸವಾಗುತ್ತಿದೆ ಎಂದು ತಿಳಿಸಿದರು. ವಿಎಸ್‍ಕೆ ವಿಶ್ವವಿದ್ಯಾಲಯದ ಕುಲಪತಿ ಪೆÇ್ರೀ.ಸಾಹೇಬ್ ಅಲಿ ಹೆಚ್ .ನಿರಗುಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕಿ ಹನುಮಕ್ಕ, ಕಲಬುರಗಿ ಗುಲ್ಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ.ಎಂ.ಎಸ್.ಪಾಸೋಡಿ, ಬೆಂಗಳೂರು ಕಾಲೇಜು ಶಿಕ್ಷಣ ಆಯುಕ್ತರ ಕಚೇರಿಯ ಸಮನ್ವಯ ಅಧಿಕಾರಿ ಡಾ.ಶ್ರೀಕಾಂತ ಆರ್, ಕುಲಸಚಿವ ರುದ್ರೇಶ್.ಎಸ್.ಎನ್., ಕುಲಸಚಿವ (ಮೌಲ್ಯಮಾಪನ) ಪೆÇ್ರೀ.ರಮೇಶ್ ಓ.ಓಲೇಕಾರ, ಹಣಕಾಸು ಅಧಿಕಾರಿ ಡಾ.ಸದ್ಯೋಜಾತಪ್ಪ, ವಿಶ್ವವಿದ್ಯಾಲಯದ ರೇಂಜರ್ ಅಂಡ್ ರೋವರ್‍ನ ಸಂಯೋಜಕ ಡಾ.ಶಶಿಧರ್ ಕೇಲೂರು ಮತ್ತು ಕಲ್ಯಾಣ ಕರ್ನಾಟಕ ವಿಭಾಗ ರೋವರ್ ಅಂಡ್ ರೇಂಜರ್ ಸಹಾಯಕ ರಾಜ್ಯ ಸಂಘಟನಾ ಆಯುಕ್ತೆ ಮಲ್ಲೇಶ್ವರಿ ಜುಜಾರೆ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಧ್ಯಾಪಕರು, ಉಪನ್ಯಾಸಕರು ಹಾಗೂ ಇತರರು ಉಪಸ್ಥಿತರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ