ಗುರುವಾರ, ಅಕ್ಟೋಬರ್ 12, 2023
ಶಿಷ್ಟಾಚಾರದನ್ವಯ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮೊಹಮ್ಮದ್ ಝುಬೇರಾ
ಬಳ್ಳಾರಿ,ಅ.12(ಕರ್ನಾಟಕ ವಾರ್ತೆ):
ಇದೇ ಅಕ್ಟೋಬರ್ 28ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶಿಷ್ಟಾಚಾರದನ್ವಯ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು, ಬೆಳಿಗ್ಗೆ ಎಸ್‍ಪಿ ವೃತ್ತದ ಬಳಿಯಿರುವ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆ ಹಾಗೂ ವಾಲ್ಮೀಕಿ ಭವನದಲ್ಲಿರುವ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ವಿವಿಧ ಕಲಾ ತಂಡಗಳಿಂದ ಭವ್ಯ ಮೆರವಣಿಗೆ ನಡೆಯಲಿದೆ ಎಂದರು.
ಜಯಂತಿಯ ವೇದಿಕೆ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದ ಅವರು, ವಿವಿಧ ಇಲಾಖೆ ಅಧಿಕಾರಿಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು, ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾಮರಸ್ಯತೆಯಿಂದ ಆಚರಿಸಲು ಅಧಿಕಾರಿಗಳು, ವಿವಿಧ ಸಂಘಗಳು, ಸಾರ್ವಜನಿಕರು ಸರ್ಕಾರಿ ಹಬ್ಬಗಳಲ್ಲಿ ಸ್ವ-ಇಚ್ಛೆಯಿಂದ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ವಾಲ್ಮೀಕಿ ಸಮಾಜ ಮುಖಂಡರು ಸಹ ಮಾತನಾಡಿ ನಂತರ ಕೆಲವೊಂದು ಬೇಡಿಕೆಗಳನ್ನು ಪ್ರಸ್ತಾಪಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಬಿ.ಜಾನಕಿ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ