ಶನಿವಾರ, ಅಕ್ಟೋಬರ್ 7, 2023

ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆಯ ವಿಶೇಷ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನ

ಬಳ್ಳಾರಿ,ಅ.07(ಕರ್ನಾಟಕ ವಾರ್ತೆ): ಡಿ.03ರಂದು ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಪ್ರಸ್ತಕ ಸಾಲಿಗೆ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ವಿಶೇಷ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿಯ ನಿಗದಿತ ನಮೂನೆಗಳನ್ನು ಇಲಾಖೆಯ ವೆಬ್ ಸೈಟ್‍ನಲ್ಲಿ www.welfareofdisabled.kar.nic.in ಅಥವಾ www.dwdsc.kar.nic.in ನಲ್ಲಿ ಪಡೆಯಬಹುದಾಗಿದೆ. ಅರ್ಜಿ ದ್ವಿಪ್ರತಿಯಲ್ಲಿ ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಅ.25ರೊಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಕ್ರೂಢೀಕೃತ ಹಾರ್ಡ್ ಮತ್ತು ಸಾಫ್ಟ್ ಪ್ರತಿಗಳು ಸಲ್ಲಿಸಬೇಕು. ಅರ್ಜಿ ನಮೂನೆಯಲ್ಲಿ ಅರ್ಜಿದಾರರು ಜಿಲ್ಲೆ ರಾಜ್ಯ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಬಗ್ಗೆ ಲಗತ್ತಿಸಿದ ಪ್ರಮಾಣ ಪತ್ರಗಳನ್ನು ಕ್ರಮಸಂಖ್ಯೆಯೊಂದಿಗೆ ನಮೂದಿಸಬೇಕು. ವಿಕಲಚೇತನರ ಗುರುತಿನ ಚೀಟಿ ಪ್ರತಿಯನ್ನು ಯುಡಿಐಡಿ ಕಾರ್ಡ್ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ