ಗುರುವಾರ, ಅಕ್ಟೋಬರ್ 5, 2023

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಅ.05(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಯರ್ರಂಗಳಿ ಪೆÇೀಸ್ಟ್‍ನ ಕೃಷ್ಣಾನಗರ ಕ್ಯಾಂಪ್ ನಿವಾಸಿ ಹೆಚ್.ಶೇಖರ್ ಎನ್ನುವ 19 ವರ್ಷದ ಯುವಕ ಅ.01 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ. ಯುವಕನ ಚಹರೆ ಗುರುತು: ಎತ್ತರ 5 ಅಡಿ, ತೆಳುವಾದ ಮೈಕಟ್ಟು, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಕಪ್ಪು ಕೂದಲು, ತಲೆಯ ಮೇಲ್ಭಾಗದ ಸುಳಿಯಲ್ಲಿ ಬಿಳಿ ಕೂದಲು ಹೊಂದಿದ್ದು, ತಿಳಿ ಹಳದಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕೆಂಪು ಬ್ಯಾಗ್ ತೆಗೆದುಕೊಂಡು ಹೋಗಿರುತ್ತಾನೆ. ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯ ದೂ.08392-276461, ಮೊ.9480803049 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100ಗೆ ಸಂಪರ್ಕಿಸಬಹುದಾಗಿದೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ