ಮಂಗಳವಾರ, ಅಕ್ಟೋಬರ್ 10, 2023
ಡಿ.ಎಸ್.ಟಿ-ಪಿಹೆಚ್‍ಡಿ ಶಿಷ್ಯ ವೇತನ: ಅರ್ಜಿ ಆಹ್ವಾನ
ಬಳ್ಳಾರಿ,ಅ.10(ಕರ್ನಾಟಕ ವಾರ್ತೆ):
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ (ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯ ವೇತನ ಎಂಬ ಕಾರ್ಯಕ್ರಮದಡಿ 2023-24ನೇ ಸಾಲಿನಲ್ಲಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಈಗಾಗಲೇ ಪಿ.ಹೆಚ್.ಡಿ ಪದವಿಗೆ ನೊಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಅ.30 ರೊಳಗೆ ಆನ್‍ಲೈನ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಸುವ ಲಿಂಕ್‍ಗಾಗಿ http://ksteps.karnataka.gov.in ಜಾಲಾತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪೆÇ್ರೀತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ