ಬುಧವಾರ, ಅಕ್ಟೋಬರ್ 4, 2023

ರೈತರು ಮೆಣಸಿನಕಾಯಿ ಬೆಳೆಯಲ್ಲಿ ರಸ-ಹೀರುವ ಕೀಟಗಳಿಗೆ ಅಗತ್ಯ ಮುಂಜಾಗೃತಾ ಕ್ರಮ ವಹಿಸಿ

ಬಳ್ಳಾರಿ,ಅ.04(ಕರ್ನಾಟಕ ವಾರ್ತೆ): ಜಿಲ್ಲೆಯ ರೈತರು ಮೆಣಸಿನಕಾಯಿ ಬೆಳೆಯಲ್ಲಿ ಕಂಡುಬರುವ ರಸ-ಹೀರುವ ಕೀಟಗಳ ನಿರ್ವಹಣೆ ಈ ಕೆಳಗಿನಂತೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. *ರಸ-ಹೀರುವ ಕೀಟಗಳ ನಿರ್ವಹಣೆ ಕ್ರಮ:* ಹೊಲದ ಸುತ್ತಲೂ 2-3 ಸಾಲು ಜೋಳ, ಮೆಕ್ಕೆಜೋಳ, ಸಜ್ಜೆಯನ್ನು ಬೇಲಿ ಬೆಳೆಯಾಗಿ ಅಡವಾಗಿ ಬಿತ್ತುವುದರಿಂದ ಕೀಟಗಳ ಪ್ರಸಾರವನ್ನು ನಿಯಂತ್ರಿಸಬಹುದು. ಹೊಲ ಮತ್ತು ಬದುಗಳ ಸ್ವಚ್ಛತೆಯಿಂದ ಥ್ರೀಪ್ಸ್ ನುಸಿಗಳಿಗೆ ಆಸರೆ ನೀಡುವ ಕಳೆಗಳ ನಿರ್ಮೂಲನೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ. ಸೂಕ್ತ ಅಂತರ (90*30 ಸೆಂ.ಮೀ./60*45 ಸೆಂ.ಮೀ.) ಕಾಪಾಡಬೇಕು. ಚೆನ್ನಾಗಿ ಕೊಳೆತÀ ಕೊಟ್ಟಿಗೆ ಗೊಬ್ಬರದೊಡನೆ ಮೆಟಾರೈಜಿಯಮ್ ಅನಿಸೋಪ್ಲಿಯೆ ಎಂಬ ಶಿಲೀಂದ್ರ ಕೀಟನಾಶಕದಿಂದ (2-3 ಕೆ.ಜಿ/ಟನ್) ಮೌಲ್ಯವರ್ಧನೆಗೊಳಿಸಿ ಹೊಲಗಳಿಗೆ ಹಾಕಬೇಕು. ಬೇವಿನ ಹಿಂಡಿ (200 ಕೆ.ಜಿ/ಎಕರೆಗೆ) ಮತ್ತು ಎರೆಹುಳು ಗೊಬ್ಬರವನ್ನು (500 ಕೆ.ಜಿ/ಎಕರೆಗೆ) ಮಣ್ಣಿನಲ್ಲಿ ಬೆರೆಸುವುದರಿಂದ ನಿರೋದಕ ಶಕ್ತಿ ವೃದ್ಧಿಗೊಳ್ಳುತ್ತದೆ. ಶಿಫಾರಸ್ಸು ಪ್ರಮಾಣದ ರಸಗೊಬ್ಬರದೊಂದಿಗೆ ಪೆÇಟ್ಯಾಶ್‍ನ ಬಳಕೆ ವೃದ್ಧಿಸುವುದರಿಂದ ಕೀಟ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದಿದ್ದಾರೆ. ನೀಲಿ ಅಂಟಿನ ಬಲೆಗಳನ್ನು 25-30 ಎಕರೆಗೆ ಬೆಳೆಯ ಎತ್ತರಕ್ಕೆ ಅಳವಡಿಸಬೇಕು. ನಂತರದಲ್ಲಿ ಕುಂಟೆಯೊಡೆಯುವುದರಿಂದ ಕೋಶಾವಸ್ಥೆಯಲ್ಲಿರುವ ಥ್ರಿಪ್ಸ್ ನುಸಿಯನ್ನು ನಾಶಪಡಿಸಬಹುದು. ಸಾಧ್ಯವಾದಲ್ಲಿ ಕಾಲುವೆ ಮುಖಾಂತರ ನೀರುಣಿಸುವ ಬದಲು ತುಂತುರು ನೀರಾವರಿ ಪದ್ಧತಿಯನ್ನು ಅಳವಡಿಸಬೇಕು. ಸಿಲ್ವರ್ ಬಣ್ಣದ ಪ್ಲಾಸ್ಟಿಕ್ ಶೀಟ್ (25-30 ಮೈಕ್ರಾನ್) ನಿಂದ ಮಲ್ಚಿಂಗ್ ಮಾಡುವುದರಿಂದ ಮಣ್ಣಿನಲ್ಲಿ ಕೋಶಾವಸ್ಥೆಗೆ ಹೋಗುವುದನ್ನು ತಡೆಯಬಹುದು. ತೀವ್ರ ಬಾಧೆಗೊಳಗಾದ ಗಿಡಗಳನ್ನು ಕಿತ್ತು ಗುಂಡಿಯಲ್ಲಿ ಮುಚ್ಚಬೇಕು ಅಥವಾ ಸುಡಬೇಕು. ಪರಭಕ್ಷಕ/ಮಿತ್ರ ಕೀಟಗಳ ವೃದ್ಧಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಕೀಟನಾಶಕಗಳ ಬದಲು ಪರಿಸರ ಸ್ನೇಹಿ ಕೀಟನಾಶಕಗಳಾದ ಶೇ.5 ರ ಬೇವಿನ ಬೀಜದ ಕಷಾಯ, ಬೇವಿನ ಎಣ್ಣೆ (1500 ಪಿ.ಪಿ.ಯಂ) 3 ಮಿ.ಕೀ/ಲೀ. ಹೊಂಗೆ ಎಣ್ಣೆ 3 ಮಿ.ಲೀ/ಲೀ ನೀರಿಗೆ ಬೆರೆಸಿ ಸಿಂಪಡಿಸಬೇಕು. ಕೇಂದ್ರ ಕೀಟನಾಶಕಗಳಾದ ಬಿವೇರಿಯಾ ಬಸ್ಸಿಯಾನ ಅಥವಾ ಲೆಕ್ಯಾನಿಸಿಲಿಯಂ ಲೆಕ್ಯಾನಿ ಅಥವಾ ಮೆಟಾರೈಜಿಯಮ್ ಅನಿಸೋಪ್ಲಿಯೇಯನ್ನು 5 ಗ್ರಾಂ/ಲೀ. ನೀರಿಗೆ ಬೆರೆಸಿ ಸಿಂಪಡಿಸಬೇಕು. ಅವಶ್ಯಕತೆಗನುಸಾರವಾಗಿ ಶಿಫಾರಸ್ಸು ಮಾಡಿರುವ ರಾಸಾಯನಿಕ ಕೀಟನಾಶಕಗಳದ 0.5 ಮಿ.ಲೀ. ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್. ಅಥವಾ 0.3 ಗ್ರಾಂ. ಥಯಾಮಿಥೋಕ್ಸಾಮ್ 25 ಡಬ್ಲ್ಯೂ.ಜಿ. ಅಥವಾ 1.0 ಮಿ.ಲೀ. ಫಿಪೆÇ್ರೀನಿಲ್ 5 ಎಸ್.ಸಿ. ಅಥವಾ 1.0 ಗ್ರಾಂ. ಡಯಾಫೆನ್ಥಯೂರಾನ್ 50 ಡಬ್ಲ್ಯೂ.ಪಿ. ಅಥವಾ 0.6 ಮಿ.ಲೀ. ಸ್ಪøನೊಟೆರಾವ್ 11.7 ಎಸ್.ಸಿ. ಯನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಎಂದು ಜಿಪಂ ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ