ಬುಧವಾರ, ಅಕ್ಟೋಬರ್ 18, 2023

ನೀರಾವರಿ ಸಲಹಾ ಸಮಿತಿ ವೇಳಾಪಟ್ಟಿಯಂತೆ ನೀರು ಬಿಡುಗಡೆ

ಬಳ್ಳಾರಿ,ಅ.18(ಕರ್ನಾಟಕ ವಾರ್ತೆ): 2023-24ನೇ ಸಾಲಿನ 119ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರ ತೀರ್ಮಾನದಂತೆ, ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಮುಂಗಾರು ಹಂಗಾಮಿನ ಬೆಳೆಗಳನ್ನು ಸಂರಕ್ಷಿಸಲು ಜಲಾಶಯದಲ್ಲಿ ಲಭ್ಯವಾಗಬಹುದಾದ ನೀರಿನ ಪ್ರಮಾಣವನ್ನು ಅಂದಾಜಿಸಿ ಈ ಕೆಳಗಿನಂತೆ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ. ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ: ಅ.01 ರಿಂದ ನ.30 ರವರೆಗೆ 4100 ಕ್ಯೂಸೆಕ್ಸ್‍ನಂತೆ ಲಭ್ಯತೆ ಅನುಸಾರ ಹರಿಸಲಾಗುವುದು. ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆ: ಅ.01 ರಿಂದ ನ.10 ರವರೆಗೆ 1000 ಕ್ಯೂಸೆಕ್ಸ್‍ನಂತೆ ಲಭ್ಯತೆ ಅನುಸಾರ ಹರಿಸಲಾಗುವುದು. ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ: ಅ.01 ರಿಂದ ನ.30 ರವರೆಗೆ 750 ಕ್ಯೂಸೆಕ್ಸ್‍ನಂತೆ ನೀರು ಹರಿಸಲಾಗುವುದು. ರಾಯ ಬಸವಣ್ಣ ಕಾಲುವೆ: ನ.01 ರಿಂದ ಡಿ.10 ರವರೆಗೆ 200 ಕ್ಯೂಸೆಕ್ಸ್‍ನಂತೆ ನೀರು ಹರಿಸುವುದನ್ನು ಮುಂದುವರಿಸಲಾಗುವುದು. ಪ್ರಸ್ತುತ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿರುವುದರಿಂದ ಡಿ.10 ರಿಂದ 2024ರ ಫೆ.10 ರವರೆಗೆ ನೀರು ಸ್ಥಗಿತಗೊಳಿಸಲಾಗುವುದು. ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ: ನ.30 23 ಕ್ಯೂಸೆಕ್ಸ್‍ನಂತೆ ನೀರುಜಲಾಶಯದ ನೀರಿನ ಮಟ್ಟ 1600 ಅಡಿ ತಲಪುವವರೆಗೆ ಅಥವಾ ಲಭ್ಯತೆ ಅನುಸಾರ ಮುಂಬರುವ ಒಳಹರಿವನ್ನು ಪರಿಗಣಿಸಿ ಮುಂದುವರಿಸಲಾಗುವುದು. *ರೈತರಲ್ಲಿ ಮನವಿ:* ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ನಿಗಧಿತ ಬೆಳೆಗಳನ್ನು ಸಂರಕ್ಷಿಸಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಬೇಕು. *ಸೂಚನೆ:* ಪ್ರಸಕ್ತ ಅಂದಾಜಿಸಿದ ನೀರಿನ ಪ್ರಮಾಣವು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಅವಲಂಬಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕøತ ಪ್ರಕಟಣೆಯನ್ನು ಪ್ರಕಟಿಸಲಾಗುವುದು ಎಂದು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಕನೀನಿನಿ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ