ಮಂಗಳವಾರ, ಅಕ್ಟೋಬರ್ 3, 2023

ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ: ನೊಂದಣಿಗೆ ಆಹ್ವಾನ

ಬಳ್ಳಾರಿ,ಅ.03(ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದಿಂದ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ಪರಿಶಿಷ್ಟ ಜಾತಿ ಮಹಿಳೆಯರಿಂದ ನೊಂದಣಿಗೆ ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು. ಪರಿಶಿಷ್ಟ ಜಾತಿ ಮಹಿಳೆಯರಿಗೆ ಮಾತ್ರ ಭಾಗವಹಿಸಲು ಅವಕಾಶ ಇರುತ್ತದೆ. ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ ಇಲ್ಲಿ ಪಡೆಯಬಹುದಾಗಿದೆ ಅಥವಾ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7483538942, 9449226221 ಮೂಲಕ ನೊಂದಾಯಿಸಿಕೊಳ್ಳಬಹುದು ಎಂದು ಸಿಡಾಕ್‍ನ ಜಂಟಿ ನಿರ್ದೇಶಕ ಸೋಮಶೇಖರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ