ಸೋಮವಾರ, ಅಕ್ಟೋಬರ್ 9, 2023
ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಗಳಡಿ ಅರ್ಜಿ ಆಹ್ವಾನ
ಬಳ್ಳಾರಿ,ಅ.09(ಕರ್ನಾಟಕ ವಾರ್ತೆ):
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯ ಪಡೆಯಲು ಇಚ್ಛಿಸುವವರಿಂದ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ಅರ್ಜಿ ಆಹ್ವಾನಿಲಾಗಿದೆ.
ನಿಗಮದ ಯೋಜನೆಗಳ ವಿವರ: ಸ್ವಯಂ ಉದ್ಯೋಗ ನೇರಸಾಲ ಯೋಜನೆ. ಗಂಗಾ ಕಲ್ಯಾಣ ಯೋಜನೆ. ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸತು). ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ. ಸ್ವಾವಲಂಬಿ ಸಾರಥಿ ಯೋಜನೆ. ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ).
*ಅರ್ಹತೆಗಳು:* ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಅಲೆಮಾರಿ, ಅರೆ ಅಲೆಮಾರಿ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇರಿಸಿದೆ.
ಅರ್ಜಿ ಸಲ್ಲಿಸಲು ನ.03 ಕೊನೆಯ ದಿನವಾಗಿದೆ (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಗಳು). ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಡಿ ಅರ್ಜಿಯನ್ನು ಸಲ್ಲಿಸಬಹುದು.
ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kaad.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂ.080-22374832 ಹಾಗೂ ಮೊ.8050770004, 8050770005 ನಿಂದ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಶ್ರೀ ಕುಮಾರಸ್ವಾಮಿ ದೇವಸ್ಥಾನ ಎದುರು, ಕ್ಲಬ್ ರೋಡ್‍ನ ವೀರನಗೌಡ ಕಾಲೋನಿಯ ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-267038ಗೆ ಸಂಪರ್ಕಿಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕೆ.ಭೀಮಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ