ಬುಧವಾರ, ನವೆಂಬರ್ 29, 2023
ಜಿಲ್ಲಾ ಮಟ್ಟದ ಯುವಜನೋತ್ಸವ ಡಿ.01ರಂದು
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವಿವೇಕಾನಂದ ಯುವಕ ಸಂಘ (ರಿ), ವಿವೇಕಾನಂದ ಯೂತ್ ಅಸೋಸಿಯೇಷನ್ (ರಿ), ರಾಮಸಾಗರ ಸ್ಥಳೀಯ ಯುವಕ ಸಂಘಗಳು ಇವರ ಸಂಯುಕ್ತಾಶ್ರಯದಲ್ಲಿ ಡಿ.01ರಂದು ಬೆಳಿಗ್ಗೆ 11ಕ್ಕೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಉಪಮಹಾಪೌರೆ ಬಿ.ಜಾನಕಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಗ್ರೇಸಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
---------
ಕಾರ್ಮಿಕ ಇಲಾಖೆಯಿಂದ ವಿವಿಧೆಡೆ ದಾಳಿ: 02 ಬಾಲಕಾರ್ಮಿಕ, 01 ಕಿಶೋರ ಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಕುರುಗೋಡು ಮತ್ತು ಕುಡುತಿನಿ ಪಟ್ಟಣದ ತೇರು ಬೀದಿ, ಬಳ್ಳಾರಿ ರಸ್ತೆ, ಕಂಪ್ಲಿ ಮುಖ್ಯ ರಸ್ತೆ ಹಾಗೂ ಹೊಸಪೇಟೆ ಪ್ರಮುಖ ರಸ್ತೆಯಲ್ಲಿರುವ ಮುಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ, ಔಷಧಿ ಅಂಗಡಿ, ಚಿಕನ್ ಸೆಂಟರ್ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ಮಾಡಿ 02 ಬಾಲಕಾರ್ಮಿಕ ಮಕ್ಕಳು ಮತ್ತು 01 ಕಿಶೋರ ಬಾಲಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ ಅವರು ತಿಳಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಚೈಲ್ಡ್ ಲೈಲ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ನಡೆಸಿ, ಅಧಿಕಾರಿಗಳೊಂದಿಗೆ ದಾಳಿ ನಡೆಸಲಾಗಿದೆ.
ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಮಕ್ಕಳ ಪೋಷಕರೊಂದಿಗೆ ಸಮಾಲೋಚಿಸಿ ಮಕ್ಕಳನ್ನು ನಿರಂತರವಾಗಿ ಶಾಲೆಗೆ ಕಳುಹಿಸಲು ಸೂಚಿಸಿ, ಶಾಲೆಗೆ ಮರುದಾಖಲಿಸಲಾಗಿದೆ. ಅವರ ವಯಸ್ಸಿನ ದಾಖಲೆಗಳನ್ನು ಪಡೆದು, ಮಾಲೀಕರ ವಿರುದ್ದ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಕಾಯ್ದೆ 1986 ರ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷ ತಹಶೀಲ್ದಾರ ರಾಘವೆಂದ್ರ ರಾವ್ ಅವರು ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಬಸವರಾಜ್, ಕಂದಾಯ ನಿರೀಕ್ಷಕ ಸುರೇಶ್, ಹಿರಿಯ ಆರೋಗ್ಯ ನಿರೀಕ್ಷಕಿ ಶಾರದ ಕೆ.ವಿ., ಕ್ಷೇತ್ರ ಕಾರ್ಯಕರ್ತೆ ಎಸ್.ಸುಧಾ, ಮಕ್ಕಳ ರಕ್ಷಣಾ ಘಟಕ ಇದಾಯತ್, ಕುಡುತಿನಿ ಆಡಳಿತ ಅಧಿಕಾರಿ ಹರಿಪ್ರಸಾದ್ ಮತ್ತು ಚೈಲ್ಡ್ ಲೈನ್ ಸಿಬ್ಬಂದಿಗಳಾದ ಕಾರ್ತಿಕ್, ಅರುಣ್ ಹಾಜರಿದ್ದರು.
------
ಕುರುಗೋಡು: ಘನತ್ಯಾಜ್ಯ ವಸ್ತು ನಿರ್ವಹಣೆ ಘಟಕ ಸ್ಥಾಪಿಸಲು ಪರಿಸರ ಅನುಮೋದನೆ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಕುರುಗೋಡು ಪುರಸಭೆ ವ್ಯಾಪ್ತಿಯ ಬೈಲೂರು ರಸ್ತೆಯಲ್ಲಿರುವ ಸರ್ವೇ ನಂ.190/3ರಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆ ಘಟಕ ಸ್ಥಾಪಿಸಲು ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಐಎ ಅಧಿಸೂಚನೆಯ 2006 ರ ನಿಬಂಧನೆಗಳ ಪ್ರಕಾರ ಪರಿಸರ ಅನುಮೋದನೆ ನೀಡಲಾಗಿದೆ ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪರಿಸರ ಅನುಮೋದನೆ ಪ್ರತಿಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವೆಬ್‍ಸೈಟ್‍ನಲ್ಲಿ hಣಣಠಿ://eಟಿviಡಿoಟಿmeಟಿಣಛಿಟeಡಿಚಿಟಿಛಿe.ಟಿiಛಿ.iಟಿ ನಲ್ಲಿ ಪರಿಶೀಲಿಸಬಹುದು ಎಂದು ಅವರು ತಿಳಿಸಿದ್ದಾರೆ.
------
ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಗುರಿಯೊಂದಿಗೆ ಸಾಗಿದ ವಿಕಸಿತ ಭಾರತ ಸಂಕಲ್ಪ ಯಾತ್ರೆ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ದೇಶದ ಮೂಲೆ ಮೂಲೆಯಲ್ಲಿರುವ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನದ ಮೂಲಕ ದೇಶದ ಮೂಲೆ ಮೂಲೆಯ ಜನರನ್ನು ಜಾಗೃತಗೊಳಿಸುವ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಭುವನೇಶ್ ಕುಮಾರ್ ಅವರು ಹೇಳಿದರು.
ಕೆನರಾ ಬ್ಯಾಂಕ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಗ್ರಾಮ ಪಂಚಾಯತಿ ಸಣಾಪುರ ಇವರ ಸಂಯುಕ್ತಾಶ್ರಯದಲ್ಲಿ ಕಂಪ್ಲಿ ತಾಲ್ಲೂಕಿನ ಸಣಾಪೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಭಾರತ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು.
ಕೇಂದ್ರ ಸರ್ಕಾರದ ಜನಕಲ್ಯಾಣ ಯೋಜನೆಗಳ ಮಾಹಿತಿ ನೀಡುವುದರೊಂದಿಗೆ ಜನಸಾಮಾನ್ಯರಿಗೂ ಆರೋಗ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅಭಿವೃದ್ಧಿ ಹೊಂದಿದ ಭಾರತ ಸಂಕಲ್ಪ ಯಾತ್ರೆಯಡಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಸಂಕಲ್ಪ ಕೈಗೊಳ್ಳಲಾಗಿದೆ ಎಂದರು.
ಈ ಅಭಿಯಾನದ ಮೂಲಕ ಸಾಮಾನ್ಯ ಜನರಿಗೆ ನೈರ್ಮಲ್ಯ ಸೌಲಭ್ಯಗಳು, ಹಣಕಾಸು ಸೇವೆಗಳು, ವಿದ್ಯುತ್ ಸಂಪರ್ಕಗಳು, ವಸತಿ ಮತ್ತು ಇತರ ಅಗತ್ಯ ಸೇವೆಗಳನ್ನು ಒದಗಿಸುವುದು ಕೇಂದ್ರ ಸರ್ಕಾರದ ಪ್ರಯತ್ನವಾಗಿದೆ. ಸಮಾಜದ ಕಟ್ಟಕಡೆಯ ಜನರಿಗೆ ಆಹಾರ, ಭದ್ರತೆ, ಪೌಷ್ಠಿಕಾಂಶ, ಆರೋಗ್ಯ ರಕ್ಷಣೆ, ಶುದ್ಧ ಕುಡಿಯುವ ನೀರು ಮತ್ತು ಗುಣಮಟ್ಟದ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಸಮಾಜದ ಕೊನೆಯ ತುದಿಯಲ್ಲಿ ವಾಸಿಸುವ ಜನರಿಗೆ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವುದು ಗುರಿಯಾಗಿದೆ ಎಂದು ತಿಳಿಸಿದರು.
ಎಲ್ಲಾ ಸರ್ಕಾರಿ ಪ್ರಯೋಜಿತ ಯೋಜನೆಗಳಾದ ಪಿಎಂಐಡಿವೈ, ಪಿಎಂಜೆಜೆಬಿವೈ, ಪಿಎಂಎಸ್‍ಬಿವೈ, ಎಪಿವೈಪಿಎಂ ಸ್ವಾನಿಧಿ, ಪಿಎಂ ವಿಶ್ವಕರ್ಮ ಮತ್ತು ಸ್ಟ್ಯಾಂಡ್ ಆಫ್ ಇಂಡಿಯಾ ಮುಂತಾದ ಯೋಜನೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಡಿ ಸಾಲ ಪಡೆದುಕೊಂಡ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ಹೊಲೆ ಸಿಲಿಂಡರ್ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಆರ್.ಡಿಲ್ಲಿ ಬಾಬು, ಸಹಾಯಕ ಮಹಾ ಪ್ರಾದೇಶಿಕ ಕಚೇರಿ ಕೆನರಾ ಬ್ಯಾಂಕ್ ಪ್ರಬಂಧಕರು ಡಿ.ವಿ.ಪಿ.ಆರ್ ಮುರಳಿ ಕೃಷ್ಣ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಹಾಯಕ ಮಹಾ ಪ್ರಬಂಧಕರಾದ ಎಚ್.ಕೆ.ಗಿರಡ್ಡಿ, ಕೆನರಾ ಬ್ಯಾಂಕ್ ಎಲ್‍ಡಿಸಿಎಂ ಸೋಮನಗೌಡ ಐನಾಪೂರ, ನಬಾರ್ಡ ಡಿಡಿಎಂ ಯುವರಾಜ ಕುಮಾರ, ಗ್ರಾಮ ಪಂಚಾಯತ ಅಧ್ಯಕ್ಷ ವೈ.ರಾಮಣ್ಣ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮೂಕಯ್ಯ, ಬ್ಯಾಂಕ್ ಸಿಬ್ಬಂದಿ, ಗ್ರಾಹಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
--------
ವ್ಯಕ್ತಿ ಕಾಣೆ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಗೆ ಬರುವ ಅಲ್ಲಿಪುರ ಗ್ರಾಮದ ಅಂಜಿನೇಯ ಗುಡಿಯ ಹತ್ತಿರ ನಿವಾಸಿ ಕೆ.ನಾಗರಾಜ್ ಎನ್ನುವ 38 ವರ್ಷದ ವ್ಯಕ್ತಿಯು ನ.24ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೆÇಲೀಸ್ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಎತ್ತರ 5.5 ಅಡಿ, ದೃಢವಾದ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಅಂಗಿ ಮತ್ತು ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯ ದೂ. 08392-276461, ಮೊ.9480803049 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಯುವಕ ಕಾಣೆ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲ್ಲೂಕು ವ್ಯಾಪ್ತಿಯ ಕಕ್ಕಬೇವಿನಹಳ್ಳಿ ಗ್ರಾಮದ ಅಗಸರ ಓಣಿ ನಿವಾಸಿ ಕೆ.ಗಣೇಶ ಎನ್ನುವ 22 ವರ್ಷದ ಯುವಕ ನ.15ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಯುವಕ ಚಹರೆ ಗುರುತು: ಎತ್ತರ 5.6 ಅಡಿ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಆಫ್ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯ ದೂ.08392-276461, ಮೊ.9480803049 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಅರ್ಜಿ ಆಹ್ವಾನ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ–ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ವೆಬ್‍ಸೈಟ್ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಗೆ ಭೇಟಿ ನೀಡಬಹುದು.
ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ವಿವರ, ಅರ್ಹತೆ, ದಾಖಲೆಗಳು ಹಾಗೂ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್‍ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಲು 2024ರ ಜ.10 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಮೊ.8050770005 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ದೂ.1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಕುರೇಕುಪ್ಪ: ಡೆಸ್ಕ್‍ಟಾಪ್ ಕಂಪ್ಯೂಟರ್, ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಪ್ರಸ್ತಕ ಸಾಲಿನ ಎಸ್‍ಎಫ್‍ಸಿ ಮುಕ್ತನಿಧಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗದ ಕಲ್ಯಾಣಕ್ಕಾಗಿ ಕಾಯ್ದಿರಿಸಿದ ಶೇ.24.10, 7.25 ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸೌಲಭ್ಯದ ವಿವರ: ಕುರೇಕುಪÀ್ಪ ಪುರಸಭೆ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಜನಾಂಗದ ಎಂ.ಬಿ.ಬಿ.ಎಸ್, ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಡೆಸ್ಕ್‍ಟಾಪ್ ಕಂಪ್ಯೂಟರ್ ಅಥವಾ ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನ ನೀಡಲಾಗುವುದು.
ಸೂಚನೆ: ಅರ್ಜಿಗಳನ್ನು ಉಚಿತವಾಗಿ ಕುರೇಕುಪÀ್ಪ ಪುರಸಭೆ ಕಚೇರಿಯಲ್ಲಿ ಪಡೆಯಬಹುದು, ಡಿ.31ರೊಳಗಾಗಿ ಪುರಸಭೆ ಕಚೇರಿ ನಾಮಫಲಕದಲ್ಲಿ ಸೂಚಿಸಲಾದ ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಭರ್ತಿ ಮಾಡಿ ಇದೇ ಕಚೇರಿಗೆ ಸಲ್ಲಿಸಬೇಕು, ತಡವಾಗಿ ಬಂದಂತಹ ಹಾಗೂ ಅಪೂರ್ಣ ದಾಖಲಾತಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ಹಿಂಬರಹ ನೀಡದೇ ತಿರಸ್ಕರಿಸಲಾಗುವುದು. ಮೇರಿಟ್ ಆಧಾರದ ಮೇಲೆ ಡೆಸ್ಕ್ ಟಾಪ್ ಕಂಪ್ಯೂಟರ್ ಅಥಾವಾ ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿ ಹಾಗೂ ದೂ.08395-250970ಗೆ ಸಂಪರ್ಕಿಸಬಹುದು ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
-------
ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ: ಸಂಸದ ವೈ.ದೇವೆಂದ್ರಪ್ಪ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳನ್ನು ಜನ ಸಾಮಾನ್ಯರಿಗೆ ತಲುಪಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಅಭಿವೃದ್ಧಿ ಸಹಕಾರ ಮತ್ತು ಮೇಲ್ವಿಚಾರಣೆ ಸಮಿತಿ (ದಿಶಾ) ಅಧ್ಯಕ್ಷರೂ ಆಗಿರುವ ಸಂಸದ ವೈ.ದೇವೆಂದ್ರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಅಭಿವೃದ್ಧಿ ಸಹಕಾರ ಮತ್ತು ಮೇಲ್ವಿಚಾರಣೆ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೀನ್ಸ್ ಕಚ್ಚಾ ಬಟ್ಟೆಯ ಸರಬರಾಜು ಆಗದೇ ಇರುವುದರಿಂದ ಮಹಿಳೆಯರು ನಗರದ ಬೇರೆ ಬೇರೆ ಭಾಗದಿಂದ ಜೀನ್ಸ್ ಕೇಂದ್ರಗಳಿಗೆ ಬರಲು ನಿರಾಸಕ್ತಿ ತೋರಿಸುತ್ತಿದ್ದಾರೆ. ಅದಕ್ಕಾಗಿ ಜೀನ್ಸ್ ಯೂನಿಟ್‍ನ್ನು ಪ್ರಾರಂಭಿಸಲು ಸಾಧ್ಯವಾಗುತ್ತಿಲ್ಲ ಎಂದು ಕೌಶಲಾಭಿವೃದ್ಧಿ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.
ಮಹಿಳೆಯರು ಜೀನ್ಸ್ ಕೇಂದ್ರಗಳಿಗೆ ಬರಲು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಬಿಡಲು ಬರುತ್ತದೆಯೇ ಎಂದು ಅಧಿಕಾರಿಗಳನ್ನು ಸಂಸದರು ಪ್ರಶ್ನಿಸಿದರು. ಅವರಿಗೆ ಬೇಕಾದ ತರಬೇತಿ ನೀಡಬೇಕು. ಬ್ಯಾಂಕ್ ಮತ್ತು ಇತರೆ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಪೆÇ್ರೀತ್ಸಾಹಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಬಳ್ಳಾರಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ 6 ತಿಂಗಳ ಕಟ್ಟಡ ಬಾಡಿಗೆಯನ್ನು ಪಾವತಿಸಲಾಗಿದೆ. ಸರ್ಕಾರದಿಂದ 3 ತಿಂಗಳಿಂದ ಅನುದಾನ ಬಿಡುಗಡೆಯಾಗದೇ ಇರುವುದರಿಂದ ಕಟ್ಟಡ ಬಾಡಿಗೆ ಪಾವತಿಸಿರುವುದಿಲ್ಲ. ಅಂಗನವಾಡಿ ಕೇಂದ್ರಗಳಿಗೆ ಆಹಾರ ಸಾಮಗ್ರಿಗಳನ್ನು ಸ್ವಚ್ಛಗೊಳಿಸಿ, ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ವಿತರಣೆ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ ಎಂದು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ 68 ಸಾವಿರ ಹೆಕ್ಟೇರ್ ಪ್ರದೇಶ ಮುಂಗಾರು ಬೆಳೆ ನಷ್ಟವಾಗಿದ್ದು, ಸುಮಾರು 519 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಕೃಷಿ ಅಧಿಕಾರಿ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ನಾನಾ ವಿಷಯಗಳ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜು, ಮಹಾನಗರ ಪಾಲಿಕೆಯ ಉಪಮಹಾಪೌರೆ ಬಿ.ಜಾನಕಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕುನೂರು ಅವರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
-------
ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ, ಬರ ಪರಿಹಾರ ನಮ್ಮ ಹಕ್ಕು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಹಣ ಪಾವತಿಯಾಗುತ್ತಿದೆ ರಾಜ್ಯದ ಪಾಲು ಕೇವಲ 30 ಸಾವಿರ ಕೋಟಿ ಬರುತ್ತಿದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಬರ ಪರಿಹಾರ ನಮ್ಮ ಹಕ್ಕು, ನ್ಯಾಯ ಸಮ್ಮತವಾಗಿ ನೀಡಬೇಕಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಳ್ಳಾರಿ, ವಿಜಯನಗರ ಜಿಲ್ಲೆಗಳ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಬರ ಪರಿಹಾರ ಅನುದಾನ ಶೀಘ್ರದಲ್ಲೇ ಒದಗಿಸುವ ನಿರೀಕ್ಷೆ ಇದೆ, ಕೇಂದ್ರ ಅನುದಾನ ನೀಡದಿದ್ದರೂ ರಾಜ್ಯ ಸರ್ಕಾರ ಕುಡಿಯುವ ನೀರು, ಮೇವಿನ ನಿರ್ವಹಣೆಗೆ ಈಗಾಗಲೆ ಹಣ ಬಿಡುಗಡೆ ಮಾಡಿದೆ ಹಾಗೇ ರೈತರ ಹಿತವನ್ನು ಕಾಯಲಾಗುತ್ತದೆ ಎಂದರು.
ಪ್ರಿವೆಂಟಿವ್ ಸೋಯಿಂಗ್ ಇನ್ವೋಕ್ ಹಾಗೂ ಮಧ್ಯಂತರ ಬೆಳೆ ಹಾನಿ ಪರಿಹಾರಕ್ಕೆ ಈಗಾಗಲೇ 343 ಕೊಟಿ ಬಿಡುಗಡೆಯಾಗಿದೆ. ಅದೇ ರೀತಿ ಶೀಘ್ರ ಬರ ಪರಿಹಾರ ಹಣ ಕೂಡ ರೈತರ ಖಾತೆಗೆ ನೇರವಾಗಿ ಸೇರಲಿದೆ ಅದಕ್ಕೆ ಪೂರಕವಾಗಿ ಶೇ.100ರಷ್ಟು ರೈತರ ವಿವರ ಫ್ರೂಟ್ಸ್ ಐಡಿಗೆ ದಾಖಲಿಸುವ, ಕೆ.ವೈ.ಸಿ ನೊಂದಾಯಿಸುವ ಕಾರ್ಯ ಅಭಿಯಾನದ ಸ್ವರೂಪದಲ್ಲಿ ಮಾಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಕೃಷಿ ಹಾಗೂ ಜಲಾನಯನ ಇಲಾಖೆ ಮೂಲಕ 1.43 ಕೊಟಿ ರೈತರಿಗೆ ಒಟ್ಟಾರೆ 5388 ಕೊಟಿ ರೂ. ಸೌಲಭ್ಯ ತಲುಪಿದಂತಾಗುತ್ತದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಮೂಲ 75 ಸಾವಿರ ಕೋಟಿ ಆರ್ಥಿಕ ನೆರವು ರಾಜ್ಯದ ಜನ ಸಾಮಾನ್ಯರಿಗೆ ನೇರವಾಗಿ ತಲುಪುತ್ತಿದೆ, ಇದು ಸಾಮಾಜಿಕ ಸಬಲೀಕರಣ ಸರ್ಕಾರದ ಮೂಲ ಆಶಯ ಎಂದರು.
ಸೂಕ್ಷ್ಮ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಶೇ.90 ಸಹಾಯಧನದಲ್ಲಿ ಹನಿ ನೀರಾವರಿ ಅಥವಾ ಸ್ಪಿಂಕ್ಲೇರ್ ಸಾಧನ ವಿತರಿಸಲಾಗುತ್ತಿದ್ದು, ಅರ್ಜಿ ಸಲ್ಲಿಸಿದ 48 ಗಂಟೆಗಳಲ್ಲಿ ಮಂಜೂರು ಮಾಡಲಾಗುವುದು. ಈಗಾಗಲೇ ಎಲ್ಲಾ ಅರ್ಹರಿಗೆ ಎಸ್‍ಎಂಎಸ್ ರವಾನಿಸಲಾಗಿದೆ ಎಂದರು.
*ಕಾಲಮಿತಿಯೊಳಗೆ ಯೋಜನೆ ಅನುಷ್ಠಾನಕ್ಕೆ ಸೂಚನೆ:*
ಕೃಷಿ ಮತ್ತು ಜಲಾನಯನ ಇಲಾಖೆ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನ ರೈತರ ಆರ್ಥಿಕ ಮಟ್ಟ ಸುಧಾರಣೆಗೆ ಶ್ರಮಿಸಿ ಎಂದು ಕೃಷಿ ಸಚಿವರು ಸೂಚಿಸಿದ್ದಾರೆ.
ಬಳ್ಳಾರಿ, ವಿಜಯನಗರ ಜಿಲ್ಲೆಗಳ ಇಲಾಖಾ ಯೋಜನೆಗಳ ಪ್ರಗತಿ ಪರಿಶೀಲಿಸಿದ ಅವರು ಫ್ರೂಟ್ಸ್ ಐಡಿ ನೋಂದಣಿ ಇನ್ನೊಂದು ವಾರದೊಳಗೆ ಪೂರ್ಣಗೊಳಿಸಬೇಕು. ಜಲಸಂರಕ್ಷಣೆ ಯೋಜನೆಗೆ ಆದ್ಯತೆ ನೀಡಿ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಿ ಎಂದರು.
*ವಿಮೆ ನೋಂದಣಿ ಹೆಚ್ಚಿಸಲು ಸೂಚನೆ:*
ಜಿಲ್ಲೆಯಲ್ಲಿ ಬೆಳೆ ವಿಮೆ ನೊಂದಣಿ ತುಂಬಾ ಕಡಿಮೆ ಇದ್ದು, ಇನ್ನು ಮುಂದೆ ಬೆಳೆ ವಿಮೆ ಅನುಕೂಲಗಳ ಬಗ್ಗೆ ಪ್ರತಿ ಗ್ರಾಮದಲ್ಲಿ ಜಾಗೃತಿ ಮೂಡಿಸಿ ನೊಂದಣಿ ಹೆಚ್ಚಿಸಿ ಎಂದರು.
ಬೆಳೆ ವಿಮೆ ಸೌಲಭ್ಯ ಕುರಿತು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರಪತ್ರಗಳ ಮೂಲಕ ಸಾಕಷ್ಟು ಪ್ರಚಾರ ನೀಡಬೇಕು ಹಾಗೂ ರೈತರು ಬೆಳೆ ವಿಮೆ ನೋಂದಣಿಗೆ ಮನವೊಲಿಸಬೇಕು. ಇದರಿಂದ, ಬೆಳೆ ಹಾನಿಗೊಳಗಾದಗ ಸರ್ಕಾರದಿಂದ ನೆರವು ಸಿಗಲಿದೆ ಎಂದರು.
ರಾಜ್ಯದಲ್ಲಿ ಈ ಬಾರಿ ರೂ.200 ಕೋಟಿ ವೆಚ್ಚದಲ್ಲಿ 32000 ಕೃಷಿ ಹೊಂಡ ನಿರ್ಮಾಣ ಮಾಡಲಾಗುವುದು. ಟೈ ಲ್ಯಾಂಡ್‍ಗಳಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಆದ್ಯತೆ ನೀಡಿ, ಅಲ್ಲದೆ ಇಂತಹ ಪ್ರದೇಶಗಳ ರೈತರಿಗೂ ಬೆಳೆ ಪರಿಹಾರ ಒದಗಿಸಲು ಇರುವ ತೊಡಕು ಬಗೆಹರಿಸಿ ಎಂದು ಸಚಿವರು ಸೂಚನೆ ನೀಡಿದರು.
ತಪಾಸಣೆ ಹೆಚ್ಚಿಸಿ, ನಕಲಿ ಬೀಜ, ರಸಗೊಬ್ಬರ ಮಾರಾಟದ ಪತ್ತೆ ಹಚ್ಚಿ ಪ್ರಕರಣ ದಾಖಲಿಸಬೇಕು. ಕೃಷಿ ನವೋದ್ಯಮಕ್ಕೆ ಪೆÇ್ರೀತ್ಸಾಹ ನೀಡಬೇಕು, ಹಾರ್ವೆಸ್ಟ್ ಹಬ್ ಸ್ಥಾಪನೆಗೂ ಆದ್ಯತೆ ನೀಡಿ ಎಂದರು.
ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ಮಾತನಾಡಿ, ಜಿಲ್ಲೆಯಲ್ಲಿ 382760 ರೈತರ ಪ್ಲಾಟ್ಸ್‍ಗಳಿದ್ದು, ಇಲ್ಲಿಯವರೆಗೆ 249594 ಪ್ಲಾಟ್‍ಗಳನ್ನು ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, ಶೇ.65.21 ಪ್ರಗತಿ ಸಾಧಿಸಲಾಗಿದೆ ಹಾಗೂ 133116 ಪ್ರೂಟ್ಸ್ ಪ್ಲಾಟ್‍ಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ ಎಂದು ಹೇಳಿದರು.
2023-24 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆಯಡಿ 4104 ರೈತರು ನೋಂದಣಿ ಮಾಡಿಸಲಾಗಿದೆ. ಹಿಂಗಾರು ಹಂಗಾಮಿನಲ್ಲಿ ಈಗಾಗಲೇ 1254 ರೈತರು ಬೆಳೆ ವಿಮೆ ನೋಂದಣಿ ಮಾಡಿಸಿದ್ದು, ನೋಂದಣಿ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಸಭೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ತಹಶೀಲ್ದಾರ ಗುರುರಾಜ, ಕೃಷಿ ಉಪನಿರ್ದೇಶಕ ಕೆಂಗೇಗೌಡ, ಸಹಾಯಕ ಕೃಷಿ ನಿರ್ದೇಶಕ ದಯಾನಂದ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಸಹಯೋಗದೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ಪಹಣಿ ಜೋಡಣೆ ಹಾಗೂ ಬೆಳೆ ವಿವೆ ಜಾಗೃತಿ ಮೂಡಿಸುವ ವಾಹನಗಳಿಗೆ ಚಾಲನೆ ನೀಡಲಾಯಿತು.
*ಬರ ಪರಿಸ್ಥಿತಿ ವೀಕ್ಷಣೆ ನಡೆಸಿದ ಕೃಷಿ ಸಚಿವ ಎನ್.ಚಲುವನಾರಾಯಣ ಸ್ವಾಮಿ:*
ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಕೃಷಿ ಸಚಿವ ಎನ್.ಚಲುವನಾರಾಯಣ ಸ್ವಾಮಿ ಅವರು, ಬಳ್ಳಾರಿ ತಾಲ್ಲೂಕಿನ ಹಲಕುಂದಿ ಮತ್ತು ಬೆಳಗಲ್ಲು ಗ್ರಾಮಗಳ ವ್ಯಾಪ್ತಿಯ ಬರದಿಂದ ಹಾನಿಗೊಳಗಾದ ತೊಗರಿ, ಸಜ್ಜೆ, ಸೂರ್ಯಕಾಂತಿ ಬೆಳೆಗಳ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಕುರಿತು ರೈತರು ಹಾಗೂ ಕೃಷಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಹಲಕುಂದಿಯ ಮರೀಗೌಡ, ಮಲ್ಲಿಕಾರ್ಜುನ ಹಾಗೂ ಶಿವಪ್ಪ ಎಂಬ ರೈತರ ಸೂರ್ಯಕಾಂತಿ, ತೊಗರಿ ಬೆಳೆ ಜಮೀನುಗಳಿಗೆ ಭೇಟಿ ನೀಡಿ, ಹಾನಿಯಾದ ಬೆಳೆಯನ್ನು ಪರಿಶೀಲಿಸಿದ ಸಚಿವರು, ಬೆಳೆ ವಿಮೆ ಮಾಡಿಸಿಕೊಂಡಿರುವಿರಾ ಎಂದು ವಿಚಾರಿಸಿದರು. ಬೆಳೆ ವಿಮೆ ಮಾಡಿಸಿಕೊಂಡರೆ ಬೆಳೆ ಹಾನಿಯಾದಾಗ ಹಾಗೂ ಬರ ನಷ್ಟ ಹೊಂದಿದಾಗ ಸರ್ಕಾರದಿಂದ ನೆರವು ಸಿಗಲಿದೆ. ಆದ್ದರಿಂದ ಪ್ರತಿಯೊಬ್ಬ ರೈತನು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
--------
ಮಂಗಳವಾರ, ನವೆಂಬರ್ 28, 2023
ರೈತರಿಗೆ ಶೀಘ್ರವೇ ಬರ ಪರಿಹಾರ: ಕೃಷಿ ಸಚಿವ ಚಲುವರಾಯಸ್ವಾಮಿ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಕೃಷಿ ಸಚಿವರೊಂದಿಗೆ ಈಗಾಗಲೇ ಸಭೆ ನಡೆಸಿದ್ದು, ರೈತರಿಗೆ ಶೀಘ್ರದಲ್ಲಿ ಬರ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಅವರು, ಮಂಗಳವಾರದಂದು ಜಿಲ್ಲೆಯ ಸಂಡೂರು ತಾಲ್ಲೂಕಿನ ಕೋಡಾಲು ಹಾಗೂ ರಾಜಾಪುರ ಗ್ರಾಮಗಳ ವ್ಯಾಪ್ತಿಯ ರೈತರ ಹತ್ತಿ, ನವಣೆ ಮತ್ತು ಸಜ್ಜೆ ಜಮೀನುಗಳಿಗೆ ಭೇಟಿ ನೀಡಿ, ಮಳೆ ಇಲ್ಲದೆ ಅನಾವೃಷ್ಠಿಯಿಂದ ಹಾಳಾಗಿರುವ ಬೆಳೆ ಹಾನಿ ಪರಿಶೀಲನೆ ನಡೆಸಿದರು.
ಸಂಡೂರು ತಾಲ್ಲೂಕಿನ ಕೋಡಾಲು ಗ್ರಾಮ ವ್ಯಾಪ್ತಿಯ ರೈತ ಮಾರೆಪ್ಪನ ನವಣೆ, ಹತ್ತಿ ಬೆಳೆ ವೀಕ್ಷಣೆ ಮಾಡಿ, ಬೆಳೆ ಹಾನಿ ಕುರಿತು ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಪಡೆದುಕೊಂಡರು.
ಫೂಟ್ಸ್ ಐಡಿಯಲ್ಲಿ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನನ್ನು ನೋಂದಣಿ ಮಾಡಿಸಬೇಕು. ಇದರಿಂದ ಬರ ಪರಿಹಾರಕ್ಕೆ ಅನುಕೂಲವಾಗಲಿದೆ ಎಂದು ರೈತರಿಗೆ ಮನವಿ ಮಾಡಿದರು.
ಈಗಾಗಲೇ ರಾಜ್ಯದ ಬರ ಪರಿಸ್ಥಿತಿಯ ಕುರಿತು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ತಾವು ದೆಹಲಿಗೆ ತೆರಳಿ, ಕೇಂದ್ರದ ಕೃಷಿ ಸಚಿವರ ಜೊತೆ ಸಭೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರವು ಬರ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂಬ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಎನ್.ಚಲುವನಾರಾಯಣಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಕೇಂದ್ರದಿಂದ ಬರ ಪರಿಹಾರ ಬಂದ ತಕ್ಷಣ, ಸಣ್ಣ ಮತ್ತು ಅತಿ ಸಣ್ಣ ರೈತರ ಭೂಮಿಯನ್ನು ಇಂತಿಷ್ಟು ಹಾನಿ ಎಂದು ಪರಿಗಣಿಸಿ, ಫ್ರೂಟ್ಸ್ ತತ್ರಾಂಶದ ಮೂಲಕ ನೇರವಾಗಿ ರೈತರಿಗೆ ಬರ ಪರಿಹಾರವನ್ನು ನೀಡಲಾಗುತ್ತದೆ ಎಂದು ವಿವರಿಸಿದರು.
ಸಂಡೂರು ಶಾಸಕ ಈ.ತುಕಾರಾಂ ಅವರು ಮಾತನಾಡಿ, ಈ ಭಾಗದಲ್ಲಿ ಅತಿ ಹೆಚ್ಚು ಬರ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ, ಕ್ಲಿನಿಕ್ ಆನ್ ವೀಲ್ ಮುಖಾಂತರ ಆರೋಗ್ಯ ಸೇವೆ ಸೇರಿದಂತೆ ಇತರೆ ಸೇವೆ ಒದಗಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಉಪ ನಿರ್ದೇಶಕ ಕೆಂಗೆಗೌಡ, ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ, ತಹಶೀಲ್ದಾರ ಪವನ್ ಕುಮಾರ್, ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಸಹಾಯಕ ನಿರ್ದೇಶಕ ಹನುಮಂತಪ್ಪ ನಾಯ್ಕ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)























































