ಶುಕ್ರವಾರ, ನವೆಂಬರ್ 24, 2023

ಜಿಲ್ಲಾ ಪೊಲೀಸ್; ವಾರ್ಷಿಕ ಕ್ರೀಡಾಕೂಟ ಡಿ.01, 02ರಂದು

ಬಳ್ಳಾರಿ,ನ.24(ಕರ್ನಾಟಕ ವಾರ್ತೆ): ಜಿಲ್ಲಾ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟಗಳು ಡಿ.01 ಮತ್ತು 02 ರಂದು ನಗರದ ಡಿಎಆರ್‍ನ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ತಿಳಿಸಿದ್ದಾರೆ. ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಡಿ.01ರಂದು ಬೆಳಿಗ್ಗೆ 08 ಗಂಟೆಗೆ ನಡೆಯಲಿದ್ದು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಉದ್ಘಾಟನೆ ಮಾಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಭಾಗವಹಿಸುವರು. ವಾರ್ಷಿಕ ಕ್ರೀಡಾಕೂಟಗಳ ಸಮಾರೋಪ ಸಮಾರಂಭ ಡಿ.02ರಂದು ಸಂಜೆ 04.30 ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್ ಹಾಗೂ ಬಳ್ಳಾರಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹೆಚ್ ಸೂರ್ಯವಂಶಿ ಅವರು ಭಾಗವಹಿಸುವರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಪಿ.ರವಿಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ