ಮಂಗಳವಾರ, ನವೆಂಬರ್ 28, 2023
'ತೆಕ್ಕಲಕೋಟೆ'ಯಲ್ಲಿ ಜಿಲ್ಲಾ ಮಟ್ಟದ “ಜನತಾ ದರ್ಶನ” ಕಾರ್ಯಕ್ರಮ ಡಿ.01ರಂದು
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಮುಖ್ಯಮಂತ್ರಿಯವರ ನಿರ್ದೇಶನದಂತೆ, ನಾಗರಿಕರಿಂದ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ “ಜನತಾ ದರ್ಶನ” ಕಾರ್ಯಕ್ರಮವನ್ನು ಡಿ.01 ರಂದು ಬೆಳಿಗ್ಗೆ 11ಕ್ಕೆ ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಕುಂದು ಕೊರತೆಗಳಿರುವ ಸಾರ್ವಜನಿಕರು “ಜನತಾ ದರ್ಶನ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ