ಗುರುವಾರ, ನವೆಂಬರ್ 2, 2023

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ; ಕೌನ್ಸಿಲಿಂಗ್ ನ.04ರಂದು

ಬಳ್ಳಾರಿ,ನ.02(ಕರ್ನಾಟಕ ವಾರ್ತೆ): 2021-22 ನೇ ಸಾಲಿನ ಬಳ್ಳಾರಿ ಜಿಲ್ಲೆಯಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರ (6-8 ನೇ ತರಗತಿಗಳ) ನೇಮಕಾತಿಗಾಗಿ ಪ್ರಕಟವಾದ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನ.04ರಂದು ಬೆಳಿಗ್ಗೆ 10 ಗಂಟೆಗೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಇಲಾಖೆ ವೆಬ್‍ಸೈಟ್‍ನಲ್ಲಿರುವಂತೆ ಎಲ್ಲ ಅಗತ್ಯ ವಿವರಗಳನ್ನು ಪಡೆದುಕೊಂಡು ಭಾವಚಿತ್ರ ಇರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧ ಪಟ್ಟ ದಾಖಲೆಗಳೊಂದಿಗೆ ಕಡ್ಡಾಯವಾಗಿ ಕೌನ್ಸಿಲಿಂಗ್‍ಗೆ ಹಾಜರಾಗಬೇಕು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ