ಸೋಮವಾರ, ನವೆಂಬರ್ 27, 2023
ಕಾರ್ಮಿಕ ಇಲಾಖೆಯಿಂದ ಆಕಸ್ಮಿಕ ದಾಳಿ: 04 ಬಾಲಕಾರ್ಮಿಕರ ರಕ್ಷಣೆ
ಬಳ್ಳಾರಿ,ನ.27(ಕರ್ನಾಟಕ ವಾರ್ತೆ):
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸಂಡೂರು ತಾಲೂಕಿನ ತೋರಣಗಲ್ಲು ಪಟ್ಟಣದಲ್ಲಿ ಹೊಸಪೇಟೆ ಮುಖ್ಯ ರಸ್ತೆ, ಜಿಂದಾಲ್ ಹಳೇ ಗೇಟ್ ಸರ್ಕಲ್ ಹಾಗೂ ತೋರಣಗಲ್ಲು ಗ್ರಾಮ ಮಂಚಾಯತಿ ವ್ಯಾಪ್ತಿಯಲ್ಲಿ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ 04 ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ ಅವರು ತಿಳಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಚೈಲ್ಡ್ ಲೈಲ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ನಡೆಸಿದ್ದು, ನಂತರ ಅಧಿಕಾರಿಗಳೊಂದಿಗೆ ಆಕಸ್ಮಿಕ ದಾಳಿ ಮಾಡಿ 04 ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ತರಲು ಸಂಬಂಧಿಸಿದ ಇಲಾಖೆ ಒಪ್ಪಿಸಲಾಗಿದೆ. ಮಕ್ಕಳ ವಯಸ್ಸಿನ ದಾಖಲೆಗಳನ್ನು ಪಡೆದ ನಂತರ ಮಾಲೀಕರ ವಿರುದ್ದ ಬಾಲಕಾರ್ಮಿಕ ಕಾಯ್ದೆ 1986 ರ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ತೋರಣಗಲ್ಲು ಉಪಹಶೀಲ್ದಾರ ಸುಬ್ಬರಾವ್, ಕಾರ್ಮಿಕ ನಿರೀಕ್ಷಕ ಮಂಜುನಾಥ, ಬಿಲ್ ಕಲೆಕ್ಟರ್ ಶಿವಶಂಕರಪ್ಪ, ಪುರಸಭೆ ಸಿಬ್ಬಂದಿ ಪ್ರಶಾಂತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಹೊನ್ನೂರಪ್ಪ ಹಾಜರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ