ಮಂಗಳವಾರ, ನವೆಂಬರ್ 7, 2023

ಸಿರುಗುಪ್ಪ: ನ.08ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಬಳ್ಳಾರಿ,ನ.07(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂನ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ 20 ಎಂವಿಎ ಶಕ್ತಿ ಪರಿವರ್ತಕ-3 ರ ಆಯಿಲ್ ಸೋರುವಿಕೆ ದುರಸ್ಥಿ ಕಾಮಗಾರಿ ಮತ್ತು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ನ.08 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 03 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. 33/11ಕೆವಿ ಹಚ್ಚೊಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಸಿರುಗುಪ್ಪ ನಗರ, ಬಾಗೇವಾಡಿ, ರಾರಾವಿ, ಬಿ.ಎಂ.ಸುಗೂರು, ಬೀರಳ್ಳಿ, ಹಚ್ಚೊಳ್ಳಿ, ಕುಡದರಹಾಳು, ರಾವಿಹಾಳ್, ಬಗ್ಗೂರು, ದೇಶನೂರು, ಕೆ.ಸುಗೂರು, ಕೆಂಚನಗುಡ್ಡ, ಕುರುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮತ್ತು ಶ್ರೀರಂಗ ಎಂಟಪ್ರೈಸಸ್ ಸ್ಥಾವರಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ