ಬುಧವಾರ, ನವೆಂಬರ್ 8, 2023
ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ನ.09ರಂದು
ಬಳ್ಳಾರಿ,ನ.08(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಗೆ ಬರುವ 110/11ಕೆವಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಇನ್‍ಫ್ಯಾಂಟ್ರಿ ರಸ್ತೆಯಲ್ಲಿ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.09 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-33 ಫೀಡರ್ ವ್ಯಾಪ್ತಿಯ ಕೆ.ಹೆಚ್.ಬಿ.ಕಾಲೋನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್‍ಫೆಂಟರಿ ರಸ್ತೆ, ವಾಸವಿ ಶಾಲೆ, ಕೊಳಗಲ್ ರಸ್ತೆ, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರೋಡ್, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿದ್ದಾರ್ಥ ನಗರ, ವಿಯಾನಿ ಶಾಲೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ