ಶುಕ್ರವಾರ, ನವೆಂಬರ್ 17, 2023

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ರಾಷ್ಟ್ರೀಯ ಲೋಕ ಅದಾಲತ್ ಡಿ.09ರಂದು

ಬಳ್ಳಾರಿ,ನ.17(ಕರ್ನಾಟಕ ವಾರ್ತೆ): ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಇವರ ಆದೇಶದಂತೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಡಿ.09 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಕಚೇರಿಯಲ್ಲಿ ನಡೆಯಲಿದೆ. ಅದಾಲತ್‍ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಉಭಯ ಪಕ್ಷಗಾರರು ಹಾಗೂ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ