ಮಂಗಳವಾರ, ನವೆಂಬರ್ 21, 2023
10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ನ.21(ಕರ್ನಾಟಕ ವಾರ್ತೆ):
ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ (ಎಸ್.ಸಿ/ಎಸ್.ಟಿ) ಅಭ್ಯರ್ಥಿಗಳು ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿ ಇರುವವರಿಗಾಗಿ ಜಿಲ್ಲೆಯಲ್ಲಿ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಡಿಸೆಂಬರ್ ಎರಡನೇ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದು.
ಕಾರ್ಯಕ್ರಮದಲ್ಲಿ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ನಾಯಕತ್ವದ ಗುಣಲಕ್ಷಣಗಳು, ಉದ್ಯಮವನ್ನು ಆಯ್ಕೆ ಮಾಡುವ ವಿಧಾನ, ವ್ಯಾಪಾರೋದ್ಯಮಗಳ ಅವಕಾಶಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವದು. ಈಗಾಗಲೇ ಸಿಡಾಕ್ ಮುಖಾಂತರ ತರಬೇತಿ ಪಡೆದು ಉದ್ಯಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿರುವ ಉದ್ಯಮಶೀಲರ ಅನುಭವ ಹಂಚಿಕೆ ಮತ್ತು ಸಂಬಂಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ/ಮಾಹಿತಿ ನೀಡಲಾಗುವದು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿರುವ 21 ರಿಂದ 50 ವರ್ಷದೊಳಗಿನವರು ಅರ್ಹರಾಗಿದ್ದು, ಕನಿಷ್ಠ ಪಿ.ಯು.ಸಿ. ಪಾಸಾದ ಎಸ್.ಸಿ. ಹಾಗೂ ಎಸ್.ಟಿ. ಅಭ್ಯರ್ಥಿಗಳಾಗಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ನ.28 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡದ ಸಿಡಾಕ್ ಜಂಟಿ ನಿರ್ದೇಶಕರ ಕಚೇರಿ ಅಥವಾ ಮೊ.7483538942, ಮೊ.9449226221ಗೆ ಸಂಪರ್ಕಿಸಬಹುದು ಎಂದು ಸಿಡಾಕ್‍ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ