ಶುಕ್ರವಾರ, ನವೆಂಬರ್ 10, 2023

ಸ್ವಾತಂತ್ರ್ಯ ಹೋರಾಟಗಾರ್ತಿ ಒನಕೆ ಓಬವ್ವ ಜಯಂತ್ಯೋತ್ಸವ ನ.11ರಂದು*

ಬಳ್ಳಾರಿ,ನ.10(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಒನಕೆ ಓಬವ್ವ ಜಯಂತ್ಯೋತ್ಸವ ನ.11 ರಂದು ಬೆಳಿಗ್ಗೆ 10.30ಕ್ಕೆ ಡಾ. ರಾಜ್ ಕುಮಾರ್ ರಸ್ತೆ, ಸಂಸ್ಕøತಿಕ ಸಮುಚ್ಛಯದ ಆವರಣ ಹೊಂಗಿರಣದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರೆ ಡಿ.ತ್ರಿವೇಣಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಚೋರನೂರು ಸ.ಪ್ರ.ದ ಕಾಲೇಜು ಪ್ರೋಫೆಸರ್ ಡಾ. ಎಂ.ರಾಜಣ್ಣ ಅವರು ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ, ಮಹಾನಗರ ಪಾಲಿಕೆ ಆಯುಕ್ತರು ಜಿ. ಖಲೀಲ್‍ಸಾಬ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೊನ್ನೂರಪ್ಪ.ಟಿ ಅವರು ಉಪಸ್ಥಿತರಿರಲಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ