ಶುಕ್ರವಾರ, ನವೆಂಬರ್ 10, 2023

ವಿದ್ಯುತ್ ವ್ಯತ್ಯಯ ನ.12ರಂದು

ಬಳ್ಳಾರಿ,ನ.10(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಗೆ ಬರುವ 110/11ಕೆವಿ ಸೋಮಸಮುದ್ರ ವಿದ್ಯುತ್ ಉಪ ಕೇಂದ್ರದಲ್ಲಿ ವಿದ್ಯುತ್ ಪರಿವರ್ತಕ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.12 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆ ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-6 ಫೀಡರ್ ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಬಾವಿ. ಎಫ್-10 ಫೀಡರ್ ವ್ಯಾಪ್ತಿಯ ಅಶೋಕ ನಗರ, ಹವಂಭಾವಿ, ಟಿ.ಎಂ.ಜಿ ಲೇಔಟ್, ರಾಮನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ