ಗುರುವಾರ, ನವೆಂಬರ್ 2, 2023

ನ.13ರಂದು ಪಿಂಚಣಿ ಅದಾಲತ್

ಬಳ್ಳಾರಿ,ನ.02(ಕರ್ನಾಟಕ ವಾರ್ತೆ): ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸಲು ನವೆಂಬರ್ 13ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಿಂಚಣಿ ಅದಾಲತ್‍ನ್ನು ಬಳ್ಳಾರಿ ಪ್ರಾದೇಶಿಕ ಕಚೇರಿಯಲ್ಲಿ ಏರ್ಪಡಿಸಲಾಗಿದೆ. ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ಬಳ್ಳಾರಿಯ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ಇವರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ತಮ್ಮ ಪಿ.ಪಿ.ಒ ಸಂಖ್ಯೆ ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ಕುಂದು ಕೊರತೆಯ ಸ್ವರೂಪ ಇತ್ಯಾದಿಗಳನ್ನು ಪತ್ರ ಮೂಲಕ ಬರೆದು ನವೆಂಬರ್ 10ರೊಳಗೆ ಕಳುಹಿಸಬೇಕು. ಪತ್ರ, ಲಕೋಟೆಯ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-226304 ಗೆ ಸಂಪರ್ಕಿಸಬಹುದು ಎಂದು ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ