ಸೋಮವಾರ, ನವೆಂಬರ್ 13, 2023

ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನ.15ರಂದು

ಬಳ್ಳಾರಿ,ನ.13(ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಸಮಗ್ರ ಮಕ್ಕಳ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ, 2023-24ನೇ ಸಾಲಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಎನ್‍ಎನ್‍ಡಬ್ಲ್ಯೂ-ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಕಾರ್ಯಕ್ರಮ (ನ.15ರಂದು 21ರವರೆಗೆ), ಐಡಿಸಿಎಫ್-ತೀವ್ರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ (ನ.15ರಿಂದ ನ.28ರವರೆಗೆ), ಎಸ್‍ಎಎಎನ್- ನ್ಯುಮೋನಿಯಾ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಹಾಗೂ ಕ್ರಿಯೆ 2023 (ನ.15ರಿಂದ 2024ರ ಫೆ.29ರವರೆಗೆ) ಮತ್ತು ಎಎಂಪಿಕೆ-ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ (ನ.15ರಿಂದ ಡಿ.08ರವರೆಗೆ) ಸೇರಿದಂತೆ ಎಲ್ಲಾ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವನ್ನು ನ.15ರಂದು ಬೆಳಿಗ್ಗೆ 10 ಗಂಟೆಗೆ ದೇವಿನಗರದ ಮೇದಾರ್ ವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ