ಬುಧವಾರ, ನವೆಂಬರ್ 15, 2023

ವಿದ್ಯುತ್ ವ್ಯತ್ಯಯ ನ.16ರಂದು

ಬಳ್ಳಾರಿ,ನ.15(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಗೆ ಬರುವ 11ಕೆವಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ವುಡ್‍ಲ್ಯಾಂಡ್ ಸರ್ಕಲ್‍ನ ಇನ್‍ಫ್ಯಾಂಟರಿ ರಸ್ತೆಯಲ್ಲಿ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.16 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-33 ಫೀಡರ್‍ನ ಕೆ.ಚ್.ಬಿ ಕಾಲೋನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್‍ಫ್ಯಾಂಟರಿ ರಸ್ತೆ, ವಾಸವಿ ಶಾಲೆ, ಕೊಳಗಲ್ ರಸ್ತೆ, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರೋಡ್, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿದ್ದಾರ್ಥ ನಗರ, ವಿಯಾನಿ ಶಾಲೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ