ಬುಧವಾರ, ನವೆಂಬರ್ 15, 2023

ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ನ.16ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ನ.15(ಕರ್ನಾಟಕ ವಾರ್ತೆ): ಬಳ್ಳಾರಿ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ನ ಫೀಡರ್ ಎಫ್-36ರ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.16ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಗರದ ಬಂಡಿಹಟ್ಟಿ, ರಾಮನಗರ, ಡಾರ್ಲಸ್ ಕಾಲೋನಿ, ರೆಡ್ಡಿ ಲೇಔಟ್, ಜಾಗೃತಿ ನಗರ, ಕೇಂದ್ರಿಯ ವಿದ್ಯಾಲಯ, ಆಶ್ರಯ ಕಾಲೋನಿ, ಈದ್ಗ ರಸ್ತೆ, ಟೀಚರ್ಸ್ ಕಾಲೋನಿ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ