ಬುಧವಾರ, ನವೆಂಬರ್ 15, 2023

ಕುಡಿತಿನಿಯಲ್ಲಿ ಅಪ್ರೆಂಟಿಸ್‍ಶಿಪ್ ಮೇಳ ನ.20ರಂದು

ಬಳ್ಳಾರಿ,ನ.15(ಕರ್ನಾಟಕ ವಾರ್ತೆ): ಕುಡುತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಜಿಲ್ಲಾ ಮಟ್ಟದ ಅಪ್ರೆಂಟಿಸ್‍ಶಿಪ್ ಮೇಳವನ್ನು ನ.20ರಂದು ಬೆಳಿಗ್ಗೆ 10 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಪ್ರಭಾರಿ ಪ್ರಾಚಾರ್ಯರಾದ ದೇವೆಂದ್ರ ಕುಮಾರ್.ಡಿ ಅವರು ತಿಳಿಸಿದ್ದಾರೆ. ಈ ಮೇಳದಲ್ಲಿ ಉದ್ದಿಮೆದಾರರು ಮತ್ತು ಬೆಂಗಳೂರಿನ ಪ್ರತಿಷ್ಠಿತ ಎಂಎನ್‍ಸಿ ಕಂಪನಿಗಳು ಭಾಗವಹಿಸಲಿವೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರಾಚಾರ್ಯರು ತಮ್ಮ ಸಿಬ್ಬಂದಿಗಳೊಂದಿಗೆ ಆಗಮಿಸಬೇಕು ಎಂದು ಅವರು ತಿಳಿಸಿದ್ದಾರೆ. ಶಿಶಿಕ್ಷು ತರಬೇತಿ ನೊಂದಣಿಗಾಗಿ ಐಟಿಐ ಉತ್ತೀರ್ಣರಾದ ಮತ್ತು ಫಲಿತಾಂಶ ನಿರೀಕ್ಷೆಯಲ್ಲಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲಕ ದಾಖಲಾತಿಗಳೊಂದಿಗೆ ಹಾಜರಾಗಬಹುದು ಎಂದು ದೇವೆಂದ್ರಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ