ಶುಕ್ರವಾರ, ನವೆಂಬರ್ 24, 2023

ನ.27ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಬಳ್ಳಾರಿ,ನ.(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪವಿಭಾಗ-1ರ 220/11ಕೆ.ವಿ ವ್ಯಾಪ್ತಿಯಲ್ಲಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2 ಮೇಲೆ ಇರುವ ಫೀಡರ್‍ಗಳ ಸಿ.ಟಿಗಳನ್ನು ಬದಲಾಯಿಸುವ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.27ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಎಫ್-34, ಎಫ್-36, ಎಫ್-40, ಎಫ್-62, ಎಫ್-75, ಎಫ್-76, ಎಫ್-77 ಮತ್ತು ಎಫ್-39 ಫೀಡರ್‍ಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು:* ರೂಪನಗುಡಿ, ಗ್ರಾಂಡ್ ಫಂಕ್ಷನ್ ಹಾಲ್, ವೆಂಕಟರಮಣ ನಗರ, ನಬೀ ಕಾಲೋನಿ, ಅಂಜಿನಪ್ಪ ನಗರ, ಶ್ರೀರಾಂಪುರ ಕಾಲೋನಿ, ಗೋನಾಳ್, ವರಬಸಪ್ಪ ಗುಡಿ, ವಿನಾಯಕ ನಗರ, ಕಾಂಟೋನ್‍ಮೆಂಟ್, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜ್, ರೇಡಿಯೋ ಪಾರ್ಕ್, ಕೌಲ್‍ಬಜಾರ್ ಮೇನ್ ರೋಡ್, ಟೈಲರ್ ಬೀದಿ, ಕುವೆಂಪು ನಗರ, ಜಯನಗರ, ಚಂದ್ರ ಕಾಲೋನಿ, ರಾಮಾಂಜನೇಯ ನಗರ, ಸಿ.ಎಮ್.ಸಿ ಕಾಲೋನಿ, ಎಕ್ಸ್ ಸರ್ವಿಸ್‍ಮೆನ್ ಕಾಲೋನಿ, ಅರಣ್ಯ ಕ್ವಾಟರ್ಸ್, ಜಾಗೃತಿ ನಗರ, ಟ್ರಾಮಾ ಕೇರ್ ಸೆಂಟರ್, ವಿಮ್ಸ್ ಆಸ್ಪತ್ರೆ, ಜಲ ಶುದ್ದೀಕರಣ ಕೇಂದ್ರ, ಕೊಳಗಲ್ಲು ಗ್ರಾಮ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ