ಸೋಮವಾರ, ನವೆಂಬರ್ 27, 2023
ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಮೇಣದ ಬತ್ತಿ ಬೆಳಕು ಜಾಥಾ ನ.30ರಂದು
ಬಳ್ಳಾರಿ,ನ.27(ಕರ್ನಾಟಕ ವಾರ್ತೆ):
ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ನ.30ರಂದು ಸಂಜೆ 6 ಗಂಟೆಗೆ ಮೇಣದ ಬತ್ತಿ ಬೆಳಕು ಜಾಥಾವನ್ನು ಜಿಲ್ಲಾ ಆಸ್ಪತ್ರೆಯ ಅವರಣದಿಂದ ರಾಯಲ್ ವೃತ್ತದವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ವಿ.ಇಂದ್ರಾಣಿ ಅವರು ತಿಳಿಸಿದ್ದಾರೆ.
ಡಿ.01ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾವನ್ನು ಜಿಲ್ಲಾ ಆಸ್ಪತ್ರೆ ಅವರಣದಿಂದ ನಡೆಯಲಿದ್ದು, ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕಲ್ಯಾಣಾಧಿಕಾರಿಗಳು ಚಾಲನೆ ನೀಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ