ಬುಧವಾರ, ನವೆಂಬರ್ 8, 2023
ಕರ್ನಾಟಕ ಸಂಭ್ರಮ-50ರ ರಥಯಾತ್ರೆ ಸಂಚಾರ ಕುರಿತ ಪೂರ್ವಭಾವಿ ಸಭೆ ನ.09ರಂದು
ಬಳ್ಳಾರಿ,ನ.08(ಕರ್ನಾಟಕ ವಾರ್ತೆ):
ಕರ್ನಾಟಕ ಏಕೀಕರಣಗೊಂಡು 50ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ-50ರ ರಥಯಾತ್ರೆ ಸಂಚರಿಸುತ್ತಿದ್ದು, ಜಿಲ್ಲೆಯಲ್ಲಿ ನ.16ರಿಂದ 24ರವರೆಗೆ ರಥಯಾತ್ರೆ ಸಂಚಾರ ನಡೆಸಲಿದೆ. ಈ ಸಂಭ್ರಮದ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಕನ್ನಡ ಪರ ಸಂಘಟನೆಗಳೊಂದಿಗೆ ನ.09ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ